- ಅನಾರೋಗ್ಯ ಕಾರಣದಿಂದ ಆತ್ಮಹತ್ಯೆಗೆ ಶರಣು
- ಅಪಘಾತ: ರಸ್ತೆಯಲ್ಲಿ ಬಿದ್ದವನ ಪ್ರಾಣ ಉಳಿಸಿದ!
- ಶೆಡ್ಗಾರು ಬಳಿ ಕತ್ತಿಯಿಂದ ಹಲ್ಲೆ..!: ಆಸ್ಪತ್ರೆಗೆ ದಾಖಲು
NAMMUR EXPRESS
ತೀರ್ಥಹಳ್ಳಿ: ಆಗುಂಬೆ ಬಳಿ ಗೃಹಿಣಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅನಾರೋಗ್ಯ ಕಾರಣ ಮಾನಸಿಕವಾಗಿ ನೊಂದು ಸಾವಿಗೆ ಶರಣಾಗಿದ್ದಾಳೆ ಎಂದು ಪ್ರಕರಣ ದಾಖಲಾಗಿದೆ.
ತೀರ್ಥಹಳ್ಳಿ ತಾಲ್ಲೂಕು ಆಗುಂಬೆ ಸಮೀಪದ ಮಳಲಿ ಗ್ರಾಮದಲ್ಲಿ ನಡೆದಿದೆ. ಬುಧವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಭಾವತಿ (45 ವರ್ಷ) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಈಕೆಗೆ ಓರ್ವ ಹೆಣ್ಣು ಮಗಳಿದ್ದಾಳೆ.
ರಸ್ತೆಯಲ್ಲಿ ಬಿದ್ದವನ ಜೀವ ಉಳಿಸಿದ ನೌಕರ!: ಇತ್ತೀಚೆಗೆ ರಸ್ತೆ ಅಪಘಾತಗಳು ದಿನೇದಿನೇ ಹೆಚ್ಚುತ್ತಿದ್ದು, ಪ್ರಾಣಾಪಾಯಗಳು ಉಂಟಾಗುತ್ತಿದೆ. ಮಂಗಳವಾರ ರಾತ್ರಿ ಕೋಣಂದೂರು ಸಮೀಪ ಬೈಕ್ ಹಾಗೂ ದನದ ನಡುವೆ ಅಪಘಾತ ಸಂಭವಿಸಿತ್ತು. ಬೈಕ್ ಸವಾರನಿಗೆ ಪೆಟ್ಟಾಗಿತ್ತು. ಅದೃಷ್ಟವಶಾತ್ ಆ ಸಂದರ್ಭದಲ್ಲಿ ತೀರ್ಥಹಳ್ಳಿಯ ಅಗ್ನಿಶಾಮಕ ದಳದ ಸಿಬ್ಬಂದಿಯಾದ ರವಿ ಶೆಟ್ಟಿ ಅವರು ಅದೇ ಮಾರ್ಗವಾಗಿ ಹೋಗುತ್ತಿದ್ದರು. ಅಪಘಾತವಾಗಿದ್ದನ್ನು ಗಮನಿಸಿದ ರವಿ ಶೆಟ್ಟಿಯವರು ತಕ್ಷಣ ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲು ನೆರವಾಗುವ ಮೂಲಕ ಒಂದು ಜೀವವನ್ನು ರಕ್ಷಿಸಿ ಮಾನವೀಯತೆ ಮೆರೆದ ತೀರ್ಥಹಳ್ಳಿ ಅಗ್ನಿಶಾಮಕ ದಳದ ಸಿಬ್ಬಂದಿಗೆ ಎಲ್ಲರೂ ಅಭಿನಂದನೆ ತಿಳಿಸಿದ್ದಾರೆ. ಅತಿವೇಗದ ಚಾಲನೆ, ಗಮನವಿಲ್ಲದೇ ಮಾಡುವ ವಾಹನ ಚಾಲನೆಯಿಂದ ಜೀವಕ್ಕೆ ಅಪಾಯ ಕಟ್ಟಿಟ್ಟಬುತ್ತಿ. ರಸ್ತೆಅಪಘಾತಗಳ ಬಗ್ಗೆ ಪ್ರತಿಯೊಬ್ಬ ವಾಹನ ಚಾಲಕರು ಎಚ್ಚರವಹಿಸಬೇಕಾಗಿದೆ ಎಂಬುದು ನಮ್ಮೂರ್ ಎಕ್ಸ್ಪ್ರೆಸ್ ಕಳಕಳಿ.
ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ!: ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಇತ್ತೀಚೆಗೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದೆ.ಹಾಗೆಯೇ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ ಸಂಜೆ ವ್ಯಕ್ತಿಯೋರ್ವ ಏಕಾಏಕಿ ಮನೆಗೆ ನುಗ್ಗಿ ಕತ್ತಿಯಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಶೇಡ್ಗಾರ್ ಅರಮನೆಕೇರಿ ಬಳಿ ಘಟನೆ ನಡೆದಿದೆ. ಶೇಡ್ಗಾರು ಗ್ರಾಮದ ನಿವಾಸಿ ಬಡ ರೈತ ನಾಗೇಶ್ ಹಲ್ಲೆಗೊಳಗಾಗಿದ್ದು, ಸದ್ಯ ತೀರ್ಥಹಳ್ಳಿ ಜಯ ಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಡ್ರೈವರ್ ಮಹೇಶ್ಎಂಬವರು ಕತ್ತಿಯಿಂದ ಹಲ್ಲೆ ಮಾಡಿದ್ದಾನೆ, ಎಂದು ತಿಳಿಸಿರುವ ನಾಗೇಶ್ ದೂರು ನೀಡಿದ್ದು, ಮಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು.