ರಾಷ್ಟ್ರ ಮಟ್ಟದ ಚೆಸ್ ಪಂದ್ಯಕ್ಕೆ ತೀರ್ಥಹಳ್ಳಿ ಹುಡುಗಿ ಪಾವನಿ!
– ರಾಜ್ಯ ಮಟ್ಟಕ್ಕೆ ಗುಡ್ಡೇಕೇರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಶಾಹಿಫಾ!
– ಸೇವಾ ಭಾರತಿ ಶಾಲೆ ವಿದ್ಯಾರ್ಥಿನಿ ಸಾನ್ವಿ ಎಸ್.ಕಾಂಚನ್ ರಾಜ್ಯಮಟ್ಟಕ್ಕೆ
NAMMUR EXPRESS NEWS
ತೀರ್ಥಹಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಾವೇರಿಯಲ್ಲಿ ನಡೆಸಿದ U- 17 ವರ್ಷ ವಯೋಮಿತಿಯೊಳಗಿನ ಬಾಲಕಿಯರ ರಾಜ್ಯ ಮಟ್ಟದ ಚದುರಂಗ ಪಂದ್ಯಾವಳಿಯಲ್ಲಿ ತೀರ್ಥಹಳ್ಳಿ ಸಹ್ಯಾದ್ರಿ ಶಾಲೆಯ ವಿದ್ಯಾರ್ಥಿನಿ ಪಾವನಿ ಆರ್ 9 ಪಂದ್ಯಗಳಲ್ಲಿ 8 ಅಂಕಗಳನ್ನು(2 ಡ್ರಾ) ಗಳಿಸಿ ಪ್ರಥಮವಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಈ ವಿದ್ಯಾರ್ಥಿಯು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಇವಳು ಕಶ್ಚಿ ಚೆಸ್ ಸ್ಕೂಲ್ (ಕುಂದಾಪುರ) ದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾಳೆ. ಸಾಧಕ ವಿದ್ಯಾರ್ಥಿಯನ್ನು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು, ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ರಾಜ್ಯ ಮಟ್ಟಕ್ಕೆ ಗುಡ್ಡೇಕೇರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಶಾಹಿಫಾ!
ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಇತ್ತೀಚಿಗೆ ನಡೆದ ಶಿವಮೊಗ್ಗ ಜಿಲ್ಲಾ ಮಟ್ಟದ 14 ವರ್ಷವಯೋಮಿತಿಯ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡ್ಡೇಕೇರಿ ಏಳನೇ ತರಗತಿ ವಿದ್ಯಾರ್ಥಿ ಶಾಹಿಫಾ 200 ಮೀಟರ್ ರನ್ನಿಂಗ್ ನಲ್ಲಿ ಪ್ರಥಮ ಸ್ಥಾನ, 100 ಮೀಟರ್ ರನ್ನಿಂಗ್ ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವಳ ಸಾಧನೆಗೆ ಅತಿಥಿ ದೈಹಿಕ ಶಿಕ್ಷಕಿ ದೀಪಿಕಾ ಹೊನ್ನೇತಾಳು, ನೇತಾಜಿ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಉಮರ್ ಫಾರೂಕ್ ತರಬೇತಿ ನೀಡಿರುತ್ತಾರೆ . ಪ್ರಭಾರ ಮುಖ್ಯ ಶಿಕ್ಷಕಿ ಅನುಪಮಾ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಜಯಚಂದ್ರ ಹೆಚ್ಆರ್, ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಚಂದ್ರಯ್ಯ ಹೆಗಡೆ ಮಾರ್ಗದರ್ಶನ ನೀಡಿರುತ್ತಾರೆ. ಶಾಹಿಫಾ ಸಾಧನೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ಗುಡ್ಡೇಕೇರಿಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಎಸ್ ಡಿ ಎಂ ಸಿ ಪೋಷಕರು ಮತ್ತು ವಿದ್ಯಾರ್ಥಿಗಳು ನೇತಾಜಿ ಸ್ಪೋರ್ಟ್ಸ್ ಕ್ಲಬ್ ಗುಡ್ಡೇಕೇರಿ ಸೇರಿದಂತೆ ಎಲ್ಲಾ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿರುತ್ತಾರೆ.
ಸೇವಾ ಭಾರತಿ ಶಾಲೆ ವಿದ್ಯಾರ್ಥಿನಿ ಸಾನ್ವಿ ಎಸ್.ಕಾಂಚನ್ ರಾಜ್ಯಮಟ್ಟಕ್ಕೆ
ತೀರ್ಥಹಳ್ಳಿ: ಚಿತ್ರದುರ್ಗದಲ್ಲಿ ನಡೆದ ಶಿಕ್ಷಣ ಇಲಾಖೆಯ ಬೆಂಗಳೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸೇವಾಭಾರತಿಯ ಆರನೇ ತರಗತಿ ವಿದ್ಯಾರ್ಥಿನಿ ಚಿ.ಸಾನ್ವಿ ಎಸ್.ಕಾಂಚನ್ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಆಗುಂಬೆ ಬಸ್ ಸ್ಯಾಂಡ್ ನಾ ಸ್ವಪ್ಪಾ ಫ್ಯಾನ್ಸಿ ಸೆಂಟರ್ ಇದರ ಮಾಲೀಕರಾದ ವಿದ್ಯಾ ಮತ್ತು ಶಿವಾನಂದ ಬಾಳೆಬೈಲು ಇವರ ಮಗಳು. ರಾಜ್ಯ ಮಟ್ಟದಲ್ಲೂ ಈಕೆ ಉತ್ತಮ ಪ್ರದರ್ಶನ ನೀಡಲಿ ಎಂದು ಸೇವಾಭಾರತಿ ವಿದ್ಯಾಕೇಂದ್ರ ಮತ್ತು ಶಿಕ್ಷಕ ವೃಂದ ಶುಭ ಹಾರೈಸಿ ಅಭಿನಂದಿಸಿದೆ.