ದತ್ತಮಾಲಾ ಅಭಿಯಾನ ಹಿನ್ನೆಲೆ ಪೂರ್ವಭಾವಿ ಸಭೆ!
* ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಡಿ ಸಿ ಮೀನಾ ನಾಗರಾಜ್ ಸೂಚನೆ
* ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಟೆಯಿಂದ ಆಸ್ಪತ್ರೆ ತೆರೆಯಬೇಕು – ವಿಕ್ರಂ ಆಮಟೆ
NAMMUR EXPRESS NEWS
ಚಿಕ್ಕಮಗಳೂರು: ಚಿಕ್ಕಮಗಳೂರು ನ.4ರಿಂದ 10ರವರೆಗೆ ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿದ್ದು, ಈ ಅಭಿಯಾನ ಶಾಂತಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ದತ್ತಮಾಲಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ದತ್ತಪೀಠ ದರ್ಶನಕ್ಕೆ ಹೋಗುವ ಸಮಯ ಹಾಗೂ ಬರುವ ಸಮಯ ತಿಳಿಸಲಾಗುವುದು. ಗಿರಿ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಬೇಕು. ಈಗಾಗಲೇ ಮೂಲ ಸೌಲಭ್ಯ ಕಲ್ಪಿಸುವ ಕುರಿತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.ಕವಿಕಲ್ ಗಂಡಿ ಹತ್ತಿರ ರಸ್ತೆ ದುರಸ್ತಿಯಲ್ಲಿರುವುದರಿಂದ ಭಾರಿ ವಾಹನಗಳು ಬರಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಮಿನಿ ಬಸ್ಗಳ ವ್ಯವಸ್ಥೆ ಮಾಡಲು ಹಾಗೂ ವಾಹನಗಳ ದಟ್ಟಣೆ ಉಂಟಾಗುವುದರಿಂದ ಲಾಂಗ್ ಚಾರ್ಸಿ ವಾಹನಗಳನ್ನು ಬಳಸದಂತೆ ಆರ್ಟಿಓ ಅಧಿಕಾರಿಗಳಿಗೆ ತಿಳಿಸಿದರು.
ಪೋಲೀಸ್ ಇಲಾಖೆಯಿಂದ ಸುರಕ್ಷತಾ ಕ್ರಮ ಕೈಗೊಳ್ಳಲಾಗುವುದು..!!
ಬೇರೆ ಜಿಲ್ಲೆಗಳಿಂದ ದತ್ತ ಮಾಲಾಧಾರಿಗಳು ಯಾರ ನೇತೃತ್ವದಲ್ಲಿ ಬರುತ್ತಾರೆ,ಭಕ್ತರು ಉಳಿಯುವ ಸ್ಥಳ, ಹೊರ ರಾಜ್ಯಗಳಿಂದ ಬರುವವರ ಮಾಹಿತಿಯನ್ನು ಮೊದಲೇ ಪೊಲೀಸ್ ಇಲಾಖೆಗೆ ತಿಳಿಸುವುದು, ಪೀಠದೊಳಗೆ ಯಾರು ಕೂಡ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ ಹಾಗೂ ಪೋಟೋ ತೆಗೆಯುವಂತಿಲ್ಲ.
ಪೊಲೀಸ್ ಇಲಾಖೆಯಿಂದ ಸುರಕ್ಷತಾ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಪೊಲೀಸ್ ಇಲಾಖೆಯಿಂದ ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು, ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಸ್ತೆಗಳ ದುರಸ್ತಿಪಡಿಸಬೇಕು. ಚಿಕ್ಕಮಗಳೂರು ತಹಸೀಲ್ದಾರ್ ಕಚೇರಿ, ಅಲ್ಲಂಪುರ ಗ್ರಾಪಂಯಿಂದ ಅಲ್ಲಂಪುರ ಹಾಗೂ ಕೈಮರದ ಬಳಿ ಅಗತ್ಯ ಪಾರ್ಕಿಂಗ್,ತಾತ್ಕಾಲಿಕ ಶೌಚಗೃಹ ವ್ಯವಸ್ಥೆ ಮಾಡಬೇಕು, ಜವರಾಯಿ ಬಳಿ ಪೊಲೀಸ್ ಚೆಕ್ ಪೋಸ್ಟ್ ವ್ಯವಸ್ಥೆ ಮಾಡುವಂತೆ ಎಸ್ ಪಿ ವಿಕ್ರಂ ಆಮಟೆ ತಿಳಿಸಿದರು.