ಲೋಕಸಭಾ ಚುನಾವಣೆ: ಅಣ್ಣನ ಜಾಗಕ್ಕೆ ತಂಗಿ ಸ್ಪರ್ಧೆ!?
* ರಾಹುಲ್ ಗಾಂಧಿ ಎರಡು ಗೆದ್ದಿದ್ದಕ್ಕೆ ತೆರವು: ಪ್ರಿಯಾಂಕಾ ಸ್ಪರ್ಧೆ?
* ಕುತೂಹಲ ಮೂಡಿಸಿದ ವಯನಾಡು ಕ್ಷೇತ್ರ
* 52 ವರ್ಷ ಸಕ್ರಿಯವಾಗಿ ರಾಜಕೀಯದಲ್ಲಿ ತೊಡಕು!
NAMMUR EXPRESS NEWS
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಯನ್ನು ಘೋಷಣೆ ಮಾಡಿದೆ. ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ಎಐಸಿಸಿ ಅಧಿಕೃತವಾಗಿ ತಿಳಿಸಿದೆ.
ಕೇಂದ್ರ ಚುನಾವಣಾ ಆಯೋಗ ಕಳೆದ ದಿನ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಯನ್ನು ಘೋಷಣೆ ಮಾಡಿತ್ತು. ಉಪಚುನಾವಣೆ ಘೋಷಣೆ ಮಾಡಿದ ಬೆನ್ನಲ್ಲಿಯೇ ಎಐಸಿಸಿ ತನ್ನ ಸ್ಪರ್ಧಿಯನ್ನು ಅಂತಿಮ ಮಾಡಿದೆ. ಈಗಾಗಲೇ ಈ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸುವುದು ಖಚಿತವೂ ಆಗಿತ್ತು. ಚುನಾವಣೆ ಘೋಷಣೆಯಾದ ಬಳಿಕ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲು ಕಾಂಗ್ರೆಸ್ ನಿರ್ಧರಿಸಿತ್ತು. ಕಳೆದ ಲೋಕಸಭಾ ಚುನಾವಣೆಯ ವೇಳೆ ವಯನಾಡ್ ಹಾಗೂ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದರು. ಎರಡೂ ಕ್ಷೇತ್ರದಲ್ಲಿ ಗೆದ್ದಿದ್ ರಾಹುಲ್ ಗಾಂಧಿ, ತಮ್ಮ ಕುಟುಂಬದ ಪ್ರತಿಷ್ಠೆಯ ಕ್ಷೇತ್ರವಾದ ರಾಯ್ಬರೇಲಿಯನ್ನು ತೀರ್ಮಾನ ಮಾಡಿದ್ದರು.
ಈಗ ಅಣ್ಣನ ಜಾಗಕ್ಕೆ ತಂಗಿ ಸ್ಪರ್ಧೆ ಮಾಡಲಿದ್ದಾರೆ. ಇದು ಪ್ರಿಯಾಂಕಾ ಗಾಂಧಿ ಅವರ ಮೊದಲ ಚುನಾವಣೆ ಎನಿಸಿದೆ. ಮುಸ್ಲಿಂ ಸಮುದಾಯದ ಮತಗಳು ಈ ಕ್ಷೇತ್ರದಲ್ಲಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. 52 ವರ್ಷದ ಪ್ರಿಯಾಂಕಾ ಗಾಂಧಿ 1999ರಿಂದಲೂ ಸಕ್ರಿಯವಾಗಿ ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ.