ಸ್ಯಾಂಡಲ್ವುಡ್ ಸ್ಟಾರ್ ಕಿಚ್ಚ ಸುದೀಪ್ಗೆ ಮಾತೃ ವಿಯೋಗ..!!
– ವಯೋಸಹಜ ಅನಾರೋಗ್ಯದಿಂದ ನಿಧನ
– ಕನ್ನಡ ಚಿತ್ರರಂಗದ ಸಂತಾಪ
NAMMUR EXPRESS NEWS
ಬೆಂಗಳೂರು: ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ (78)ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಶನಿವಾರ ಸಂಜೆಯೇ ಸುದೀಪ್ ತಾಯಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದು ಬಂದಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.
ಜೆಪಿ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಧ್ಯಾಹ್ನ 12 ಗಂಟೆಯ ನಂತರ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ಕುಟುಂಬ ಮೂಲಗಳು ತಿಳಿಸಿದೆ. ಸುದೀಪ್ ತಾಯಿ ಮೂಲತಃ ಉಡುಪಿಯವರಾಗಿದ್ದು ಶಿವಮೊಗ್ಗದಲ್ಲಿ ಶ್ರೀ ಲಾಡ್ಜ್, ಬೆಂಗಳೂರಿನಲ್ಲಿ ಸರೋವರ ಎಂಬ ಹೋಟೆಲ್ ಉದ್ಯಮ ನಡೆಸಿ ಉದ್ಯಮದಲ್ಲಿ ಯಶಸ್ವಿಯಾಗಿದ್ದರು.ಮೃತರು ಪತಿ, ನಟ ಸುದೀಪ್ ಸೇರಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸುದೀಪ್ ತಾಯಿ ನಿಧನಕ್ಕೆ ಚಿತ್ರರಂಗ ಸಂತಾಪ ಸೂಚಿಸಿದೆ.