ರಾಜ್ಯ ರಾಜಕೀಯ ಮತ್ತೆ ಚುರುಕು!
– ಬಿಜೆಪಿ ಎಂಎಲ್ಸಿ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ: ಸ್ವತಂತ್ರ ಸ್ಪರ್ಧೆ?
– ಕರಾವಳಿಯಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನ ಜೋರು
– ಮಾಜಿ ಸಿಎಂ ಬೊಮ್ಮಾಯಿ ಮಗನ ವಿರುದ್ಧ ಬಿಗ್ ಬಾಸ್ ಜಗದೀಶ್?
– ಕಾಂಗ್ರೆಸ್ ಪಕ್ಷದಿಂದ ನಿಲ್ತಾರಾ ಮಾಜಿ ಸಚಿವ ಯೋಗೇಶ್ವರ್?
– ಮೂರು ಉಪ ಚುನಾವಣೆ: ಕಾಂಗ್ರೆಸ್, ಬಿಜೆಪಿ ಕಸರತ್ತು!
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಮೂರು ವಿಧಾನ ಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಬಿಜೆಪಿ ಸಂಡೂರು ಹನುಮಂತು ಹಾಗೂ ಶಿಗ್ಗಾವಿ ಯಿಂದ ಭರತ್ ಬೊಮ್ಮಾಯಿ ಅವರಿಗೆ ನೀಡಲಾಗಿದೆ. ಚನ್ನಪಟ್ಟಣದಿಂದ ಮೈತ್ರಿ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದಾರೆ.
ಬಿಜೆಪಿ ಎಂಎಲ್ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ
ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ಫೈಟ್ ನಡುವೆ ಸಿಪಿ ಯೋಗೇಶ್ವರ್ ಬಿಜೆಪಿ ಎಂಎಲ್ಸಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಅದರೊಂದಿಗೆ ಚನ್ನಪಟ್ಟಣ ಅಖಾಡದಲ್ಲಿ ಅತಿದೊಡ್ಡ ಬೆಳವಣಿಗೆ ನಡೆದಿದೆ.
ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ.ಅದರೊಂದಿಗೆ ಚನ್ನಪಟ್ಟಣ ಉಪಚುನಾವಣೆ ಅಖಾಡ ಇನ್ನಷ್ಟು ಜೋರಾಗಿದೆ. ಅದರೊಂದಿಗೆ ಚನ್ನಪಟ್ಟಣದಲ್ಲಿ ಸಿಪಿವೈ ಸ್ವತಂತ್ರ ಸ್ಪರ್ಧೆ ಮಾಡೋದು ಖಚಿತವಾದಂತಾಗಿದೆ. ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣಕ್ಕಾಗಿ ಸಿಪಿವೈ ರೊಚ್ಚಿಗೆದ್ದಿದ್ದು ತಮ್ಮ ಎಂಎಲ್ಸಿ ಸ್ಥಾನಕ್ಕೆ ಗುಡ್ಬೈ ಹೇಳಿದ್ದಾರೆ. ರಾಜೀನಾಮೆ ನೀಡಲು ಸಭಾಪತಿ ಹೊರಟ್ಟಿ ಅವರ ಭೇಟಿಗೆ ತೆರಳಿದ್ದಾರೆ.
ಎನ್ಡಿಎ ಅಭ್ಯರ್ಥಿಯಾಗಿ ಚುನಾವಣೆಗೆ ಕಣಕ್ಕಿಳಿಯುವ ಸಾಧ್ಯತೆ ಬಹಳ ಕ್ಷೀಣಿಸುತ್ತಿದೆ. ಜೆಡಿಎಸ್ ಹಾಗೂ ನಾವು ಒಟ್ಟಿಗೆ ಚುನಾವಣೆ ಮಾಡಬೇಕು. ನನಗೆ ಮೊದಲಿನಿಂದಲೂ ಬಿಜೆಪಿಯಿಂದ ನಿಲ್ಲಬೇಕು ಅನ್ನೋದು ಆಶಯ. ಜೆಡಿಎಸ್ನಿಂದ ನಿಂತುಕೊಳ್ಳುವಂತೆ ಮಾತನಾಡಿದ್ದಾರೆ. ಆದರೆ, ಜೆಡಿಎಸ್ ಟಿಕೆಟ್ನಲ್ಲಿ ಹೋರಾಟ ಮಾಡಲು ನಮ್ಮ ಕಾರ್ಯಕರ್ತರು ಕೂಡ ಒಪ್ಪುತ್ತಿಲ್ಲ.ಬಹಳ ಸಾರಿ ಚಿಹ್ನೆ ಬದಲಾಯಿಸಿದ್ದು, ಪಕ್ಷಾಂತರ ಮಾಡಿದ್ದು ಆಗಿದೆ..’ ಎಂದು ಹೇಳಿದ್ದಾರೆ. ವೈಯಕ್ತಿಕವಾಗಿ ನನಗೆ ಯಾವುದೇ ಟಿಕೆಟ್ನಿಂದ ಸ್ಪರ್ಧೆ ಮಾಡೋಕೆ ಹಿಂಜರಿಕೆಯಿಲ್ಲ. ಆದರೆ, ಜೆಡಿಎಸ್ ಟಿಕೆಟ್ನಿಂದ ಸ್ಪರ್ಧೆ ಮಾಡೋಕೆ ಕಾರ್ಯಕರ್ತರು ಒಪ್ಪುತ್ತಿಲ್ಲ ಎಂದಿದ್ದರು. ಗುರುವಾರ ನಾಮಪತ್ರ ಸಲ್ಲಿಕೆ: ಪಕ್ಷೇತರವಾಗಿ ಸ್ಪರ್ಧೆ ಮಾಡಲು ಇಚ್ಚಿಸಿರುವ ಸಿಪಿ ಯೋಗೇಶ್ವರ್, ಗುರುವಾರ ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಆ ಮೂಲಕ ದೋಸ್ತಿ ನಾಯಕರಿಗೆ ಸಿಪಿವೈ ಸಡ್ಡು ಹೊಡೆದಿದ್ದಾರೆ.
ಯೋಗೇಶ್ವರ್ ವಿರುದ್ಧ ಕುಮಾರಸ್ವಾಮಿ ಗುಡುಗು
ಯೋಗೇಶ್ವರ್ ಅವರು ಮೇಲೆ ಇದ್ದಾರೆ. ದೊಡ್ಡವರು. ಅವರು ಕಾಂಗ್ರೆಸ್ ನಾಯಕರ ಜತೆಯೂ ಸಂಪರ್ಕದಲ್ಲಿದ್ದಾರೆ. ಉಪಮುಖ್ಯಮಂತ್ರಿಗಳನ್ನು (ಡಿ.ಕೆ.ಶಿವಕುಮಾರ್) ಭೇಟಿ ಮಾಡಿದ್ದಾರೆ ಎಂಬ ಮಾಹಿತಿಯಿದೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತೀಕ್ಷ್ಣವಾಗಿ ಹೇಳಿದ್ದಾರೆ.
ಪಕ್ಷದ ವರಿಷ್ಠ ನಾಯಕ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಯೋಗೇಶ್ವರ್ ಬಗ್ಗೆ ನಾನೇನು ಚರ್ಚೆ ಮಾಡಲಿ? ಅವರು ಏನು ಮಾಡುತ್ತಾರೆ ಎನ್ನುವುದು ನನಗೆ ಗೊತ್ತಿಲ್ಲ. ಎಲ್ಲವನ್ನೂ ಮಾಧ್ಯಮಗಳಲ್ಲಿ ಗಮನಿಸುತ್ತಿದ್ದೇನೆ. ಅವರು ಕಾಂಗ್ರೆಸ್ ನಾಯಕರ ಜತೆಯೂ ಸಂಪರ್ಕದಲ್ಲಿದ್ದಾರೆ. ಬೇರೆ ಬೇರೆ ಪಕ್ಷಗಳ ಮುಖಂಡರ ಜತೆಯೂ ಸಂಪರ್ಕದಲ್ಲಿದ್ದಾರೆ ಎಂದು ಹೊರಗಡೆ ಚರ್ಚೆ ನಡೆಯುತ್ತಿದೆ. ಪಕ್ಕದ ಮದ್ದೂರು ಕ್ಷೇತ್ರದ ಶಾಸಕರ ಜೊತೆ ಸಂಪರ್ಕದಲ್ಲಿದ್ದಾರೆ ಅಂತ ಚರ್ಚೆ ನಡೆಯುತ್ತಿದೆ. ಎಲ್ಲವನ್ನೂ ಬಿಜೆಪಿ ವರಿಷ್ಠ ನಾಯಕರು ಗಮನಿಸುತ್ತಿದ್ದಾರೆ ಎಂದು ಹೇಳಿದರು.
ಕರಾವಳಿಯಲ್ಲಿ ಪರಿಷತ್ ಫೈಟ್!
ಮಂಗಳೂರು: ಗ್ರಾಮ ಪಂಚಾಯತ್ ಸದಸ್ಯರಿಂದ ಆಯ್ಕೆಯಾಗುವ ಪರಿಷತ್ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನ ನಡೆಯುತ್ತಿದೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಸಂಸದರಾದ ಬಳಿಕ ಆ ಸ್ಥಾನ ತೆರವಾಗಿತ್ತು.
ಶಿಗ್ಗಾವಿಯಿಂದ ಲಾಯರ್ ಜಗದೀಶ್?
ಬಿಗ್ ಬಾಸ್ ಇಂದ ಎಲಿಮಿನೇಟ್ ಆದ ಖ್ಯಾತ ವಕೀಲರು ಆದ ಜಗದೀಶ್ ಭರತ್ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.
ಕಾಂಗ್ರೆಸ್ ಕಾದು ನೋಡುವ ತಂತ್ರ!
ಮೂರು ವಿಧಾನ ಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಕಾದು ನೋಡುವ ತಂತ್ರ ಅನುಸರಿಸಿದೆ. ಇದೀಗ ಎಲ್ಲಾ ಕಡೆ ನೋಡಿಕೊಂಡು ಅಭ್ಯರ್ಥಿ ಅಳೆದು ತೂಗಿ ಹಾಕಲಿದೆ.