- ಪತ್ರಕರ್ತರಿಗೆ ಎರಡನೇ ಡೋಸ್ ಲಸಿಕೆ
- ಹಳ್ಳಿ ಹಳ್ಳಿಯಲ್ಲೂ ಲಸಿಕಾ ಅಭಿಯಾನ
- ಲಸಿಕೆ ಹಾಕಿಸಿ.. ಕರೋನಾ ಓಡಿಸಿ..!
NAMMUR EXPRESS
ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ ಕರೋನಾ ಸೋಂಕು ಹೆಚ್ಚು ಇರುವ ತಾಲೂಕು ಆಗಿದೆ. ಈ ಬಗ್ಗೆ ಗೃಹ ಮಂತ್ರಿಗಳೇ ಆತಂಕ ವ್ಯಕ್ತಪಡಿಸಿದ್ದಾರೆ. ಇತ್ತ ಗೃಹ ಸಚಿವರ ತವರಲ್ಲಿ ಲಸಿಕೆ ಅಭಿಯಾನ ಚುರುಕಿನಿಂದ ನಡೆಯುತ್ತಿದೆ.
ಆ.26ರ ಗುರುವಾರ ಶಾಂತವೇರಿ ಗೋಪಾಲ ಗೌಡ ರಂಗ ಮಂದಿರದಲ್ಲಿ ಆಟೋ ಚಾಲಕರಿಗೆ ಮೊದಲು ಮತ್ತು ಎರಡನೇ ಡೋಸ್ ಲಸಿಕೆ ಹಾಕಲಾಗುತ್ತದೆ. ಇದನ್ನು ಉಪಯೋಗಿಸಿಕೊಳ್ಳಬೇಕು ಎಂದು ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಸೊಪ್ಪುಗುಡ್ಡೆ ರಾಘವೇಂದ್ರ ಮನವಿ ಮಾಡಿದ್ದಾರೆ.
ಪತ್ರಕರ್ತರಿಗೆ ಲಸಿಕೆ: ತೀರ್ಥಹಳ್ಳಿಯ ಪತ್ರಕರ್ತರಿಗೆ ಮತ್ತು ಅವರ ಕುಟುಂಬದವರಿಗೆ ಬುಧವಾರ ಶಾಂತವೇರಿ ಗೋಪಾಲ ಗೌಡ ರಂಗಮಂದಿರದಲ್ಲಿ ಎರಡನೇ ಡೋಸ್ ಲಸಿಕೆ ಹಾಕಲಾಯಿತು. ಈ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಮೇಶ್ ಶೆಟ್ಟಿ ಸೇರಿದಂತೆ ಅನೇಕರು ಹಾಜರಿದ್ದರು. ಆರೋಗ್ಯ ಇಲಾಖೆ ಅಧಿಕಾರಿಗಳು ಸಹಕರಿಸಿದರು.
ಹಳ್ಳಿ ಹಳ್ಳಿಯಲ್ಲೂ ಅಭಿಯಾನ!:ತೀರ್ಥಹಳ್ಳಿ ತಾಲೂಕಿನ ಪ್ರತಿ ಗ್ರಾಮ ವ್ಯಾಪ್ತಿಯಲ್ಲಿ ಲಸಿಕಾ ಅಭಿಯಾನ ನಡೆಯುತ್ತಿದೆ. ಆಧಾರ್ ಕಾರ್ಡ್ ಕೊಟ್ಟು ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬೇಕಿದೆ. ಆರೋಗ್ಯ ಇಲಾಖೆ, ಸ್ಥಳೀಯ ಆಡಳಿತದ ಸಹಭಾಗಿತ್ವದಲ್ಲಿ ಈ ಕೆಲಸ ನಡೆಯುತ್ತಿದೆ.
ಮೊಬೈಲ್ ಓಟಿಪಿ, ರಿಜಿಸ್ಟರ್ ಬರಲ್ಲ: ಹಳ್ಳಿಯವರಿಗೆ ಮೊಬೈಲ್ ಓಟಿಪಿ, ಆಧಾರ್ ಲಿಂಕ್ ನಂಬರ್ ಬಗ್ಗೆ ಅರಿವು ಇರುವುದಿಲ್ಲ. ಈ ಬಗ್ಗೆ ಸ್ಥಳೀಯ ಆಡಳಿತ ಮತ್ತು ಇಲಾಖೆ ಅವರಿಗೆ ನೆರವು ನೀಡಬೇಕಿದೆ. ಇದು ನಮ್ಮೂರ್ ಎಕ್ಸ್ಪ್ರೆಸ್ ಕಳಕಳಿ.