- ಮೊಬೈಲ್ ಟವರ್ ಅಧರಿಸಿ ಆರೋಪಿಗಳ ಬಂಧನ?
- ರೇಪ್ ಮಾಡಿ ವಿಡಿಯೋ ಮಾಡಿಕೊಂಡಿದ್ದ ಕಿರಾತಕರು
- ಆರೋಪಿಗಳ ಬಂಧನಕ್ಕೆ ಕ್ರಮ: ಆರಗ ಜ್ಞಾನೇಂದ್ರ
- ಖ್ಯಾತ ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲು
NAMMUR EXPRESS
ಮೈಸೂರು: ಮೈಸೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿದ್ದು ಇದೀಗ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ.
ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ಎಂಬಿಎ ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಬಳಿ ತೆರಳಿದ್ದಳು. ಈ ವೇಳೆಯಲ್ಲಿ ಐದಾರು ಮಂದಿ ಯುವಕರ ತಂಡ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆಸಿದೆ ಎನ್ನಲಾಗಿದೆ. ಪ್ರಕರಣದ ದುಷ್ಕರ್ಮಿಗಳು ಯುವತಿ ಜತೆ ಇದ್ದ ಯುವಕನಿಗೆ ಹಲ್ಲೆ ಮಾಡಿ, ನಂತರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅತ್ಯಾಚಾರ ನಡೆದ ಬಳಿಕ ವಿದ್ಯಾರ್ಥಿನಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ.
ಈ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದೀಗ ಆರೋಪಿಗಳ ಪತ್ತೆಗೆ ಮೈಸೂರು ಪೊಲೀಸರು ಬಲೆ ಬೀಸಿದ್ದಾರೆ.ಮಂಗಳವಾರ 6:30ರಿಂದ 7:30ರವರೆಗೆ ಕೃತ್ಯ ನಡೆಸಿರುವ ಶಂಕೆ ಇದೆ. ಮೊಬೈಲ್ ಟವರ್ ಆಧಾರದ ಮೇಲೆ ತನಿಖೆ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಮದ್ಯದ ಬಾಟೆಲ್ ಸಿಗಲಿದೆ. ಕರೆಗಳ ಶೋಧ ನಡೆಸಲಾಗುತ್ತಿದೆ. ಲಲಿತಾದ್ರಿ ಪ್ರದೇಶದಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ.
ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸಂತ್ರಸ್ತೆ ಸ್ನೇಹಿತನಿಂದ ಮಾಹಿತಿ ಪಡೆಯುತ್ತಿದ್ದಾರೆ. ಅತ್ಯಾಚಾರ ಎಸಗಿದವರು ಪರಿಚಯಸ್ಥರೇ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಗೃಹ ಸಚಿವರು ಹೇಳಿದ್ದೇನು?: ಮೈಸೂರು ಪ್ರಕರಣದಲ್ಲಿ ಈವರೆಗೆ ಬಂಧಿಸಿಲ್ಲ. ತಕ್ಷಣ ಕ್ರಮ ತೆಗೆದುಕೊಂಡಿದ್ದೇವೆ.
ಮೊಬೈಲ್ ಟವರ್ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ. ಕೂಡಲೇ ಬಂಧಿಸಲಾಗುವುದು. ಸಂತ್ರಸ್ಥೆಯ ಆರೋಗ್ಯ ಸುಧಾರಿಸಿದೆ ಮೈಸೂರಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದೇವೆ ಎಂದಿದ್ದಾರೆ.
ದೊಡ್ಡಣ್ಣ ಆಸ್ಪತ್ರೆಗೆ: ಖ್ಯಾತ ನಟ ದೊಡ್ಡಣ್ಣ ಅವರು ಅನಾರೋಗ್ಯ ಕಾರಣ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.