ಡ್ರಗ್ಸ್ ಮಟ್ಟ ಹಾಕಲು ಬೇಕು ಬಿಗಿ ಕಾನೂನು!
* ಡ್ರಗ್ಸ್ ವ್ಯಸನಕ್ಕೆ ಬಲಿಯಾಗುತ್ತಿರುವ ವಿದ್ಯಾರ್ಥಿಗಳು
* ಕಾಂಗ್ರೆಸ್ ನಾಯಕ ಮಂಜುನಾಥ ಭಂಡಾರಿ ಮಾತು
NAMMUR EXPRESS NEWS
ಮಂಗಳೂರು: ಕರಾವಳಿಯಲ್ಲಿ ವ್ಯಾಪಕವಾಗುತ್ತಿರುವ ಡ್ರಗ್ಸ್ ಜಾಲವನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕಾನೂನನ್ನು ಬಿಗಿಗೊಳಿಸುವ ಅಗತ್ಯ ಇದೆ. ಈ ಕುರಿತಂತೆ ಕಾನೂನಿನಲ್ಲಿ ಕೆಲವು ಬದಲಾವಣೆ ತರುವ ನಿಟ್ಟಿನಲ್ಲಿ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದ್ದಾರೆ. ಮಂಗಳಳೂರಲ್ಲಿ ಮಾತನಾಡಿದ ಅವರು, ಡ್ರಗ್ಸ್ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗುತ್ತಿರುವ ಕಾರಣ ಕರಾವಳಿಗೆ ಮಕ್ಕಳನ್ನು ಕಳುಹಿಸಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಡ್ರಗ್ಸ್ ಜಾಲದ ಆರೋಪಿಗಳು ಸಿಕ್ಕಿಬಿದ್ದರೂ ಅವರು ಕೆಲವೇ ದಿನದ ಅಂತರದಲ್ಲಿ ಜಾಮೀನಿನಲ್ಲಿ ಹೊರಬಂದು ಮತ್ತೆ ಕೃತ್ಯಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಅದಕ್ಕಾಗಿ ಕಾನೂನಿಗೆ ತಿದ್ದುಪಡಿ ತಂದು ಕಠಿನ ನಿಯಮ ರೂಪಿಸಬೇಕಾಗಿದೆ ಎಂದರು.
ಎಚ್ಡಿಕೆಗೆ ಅಭಿವೃದ್ಧಿ ಬೇಡ, ರಾಜಕೀಯ ಮಾತ್ರ!: ಎಚ್.ಡಿ. ಕುಮಾರಸ್ವಾಮಿ ಬಿಜೆಪಿಗೆ ಈ ಹಿಂದೆ ಯಾವ ರೀತಿ ಮೋಸ ಮಾಡಿದ್ದರು ಹಾಗೂ ಈಗ ಯಾರ ಜತೆ ಇದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಜೈಲಿಗೆ ಕಳುಹಿಸುತ್ತೇನೆ ಎಂದು ಪದೇಪದೆ ಹೇಳುತ್ತಾರೆ. ಅವರನ್ನು ತಡೆದವರಾರು? ಯಾವ ಕ್ರಮ ಬೇಕಾದರೂ ಕೈಗೊಳ್ಳಿ ಎಂದು ಭಂಡಾರಿ ಹೇಳಿದರು.
ವಿಧಾನ ಪರಿಷತ್ನ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಕಿಶನ್ ಹೆಗ್ಡೆ ವಿಕಾಸ್ ಶೆಟ್ಟಿ ಲಾರೆನ್ಸ್ಡಿ ಡಿಸೋಜಾ ಉಪಸ್ಥಿತರಿದ್ದರು.