ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿ ಸಾಧನೆ ಹೆಜ್ಜೆ
– ಸಂಸ್ಕೃತಿ, ಸಾಂಸ್ಕೃತಿಕ ಕಾರ್ಯಕ್ರಮ ಜತೆಗೆ ಸಮಾಜ ಸೇವೆ
– ಇತ್ತೀಚಿಗೆ ಕಾರ್ಕಳದಲ್ಲಿ ಮಾದರಿ ಕಾರ್ಯಕ್ರಮ
NAMMUR EXPRESS NEWS
ಕಾರ್ಕಳ: ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿ ಇದೀಗ ಸಾಧನೆಯತ್ತ ಹೆಜ್ಜೆ ಇಟ್ಟಿದೆ. ಸಂಸ್ಕೃತಿ, ಸಾಂಸ್ಕೃತಿಕ ಕಾರ್ಯಕ್ರಮ ಜತೆಗೆ ಸಮಾಜ ಸೇವೆ ಮಾಡಿಕೊಂಡು ಬರುತ್ತಿದ್ದು ಇತ್ತೀಚಿಗೆ ಕಾರ್ಕಳದಲ್ಲಿ ಮಾದರಿ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಬಗ್ಗೆ ಕಾರ್ಯಕ್ರಮ ಉದ್ಘಾಟನೆ ಮಾಡಿದ ಪಡುಕುತ್ಯಾರು ಶ್ರೀ ಸರಸ್ವತೀ ಮಾತೃಮಂಡಳಿ ಉಪಾಧ್ಯಕ್ಷೆ ಕೆ. ರಮಾ ಅಚ್ಚುತ ಆಚಾರ್ಯ ಮಾತನಾಡಿ, ಗಂಡುಕಲೆಯಾದ ಯಕ್ಷಗಾನ ತಾಳಮದ್ದಲೆಯಲ್ಲಿ ಉತ್ತಮ ಅರ್ಥಗಾರಿಕೆ ನೀಡುವ ಮೂಲಕ ವಿಶ್ವಕರ್ಮರ ಪ್ರಥಮ ಮಹಿಳಾ ತಾಳಮದ್ದಲೆ ತಂಡವನ್ನು ರಚಿಸಿ ಸೇವೆ ಸಲ್ಲಿಸುತ್ತಿದೆ ಎಂದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಅಧ್ಯಕ್ಷೆ ನಳಿನಿ ವಿಜೇಂದ್ರ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಬಜಗೋಳಿ ಶ್ರೀ ಸಾಯಿಕೃಪಾ ಜ್ಯುವೆಲ್ಲರ್ಸ್ ಮಾಲಕರು ಪ್ರಸಾದ್ ಸಿ. ಆಚಾರ್ಯ, ಕಾರ್ಕಳ ನಗರ ಎಎಸ್ಐ ಜಯಂತ ಆಚಾರ್ಯ, ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕೇಸರರಾದ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು, ಪಿ. ರವಿ ಆಚಾರ್ಯ ಪೆರ್ವಾಜೆ, ಮತ್ತು ಕೆ. ಸುರೇಶ್ ಆಚಾರ್ಯ ನಿಟ್ಟೆ ಉಪಸ್ಥಿತರಿದ್ದರು
ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ
ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಯ ಅತೀ ಹೆಚ್ಚು ಅಂಕಗಳಿಸಿ ಸಮಾಜಕ್ಕೆ ಕೀರ್ತಿ ತಂದ ಎಂಟು ವಿದ್ಯಾರ್ಥಿಗಳು, ಹತ್ತನೇಯ ತರಗತಿಯ ಏಳು ಜನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿನಮ್ರ ಆಚಾರ್ಯ ಮತ್ತು ಸಿ.ಎ. ಫೌಂಡೇಶನ್ನಲ್ಲಿ ಅತಿಹೆಚ್ಚು ಅಂಕ ಗಳಿಸಿದ ಅನುಶ್ರೀ ಹಾಗೂ ಅಮರ ಶಿಲ್ಪಿ ಜಕಣಾಚಾರಿ ಪ್ರಶಸ್ತಿ ಪುರಸ್ಕೃತ ಶಿಲ್ಪಿ ರಾಮಚಂದ್ರ ಆಚಾರ್ಯ ಮತ್ತು ಜಯಕರ್ನಾಟಕ ವೇದಿಕೆ ಉಡುಪಿ ನೀಡಿರುವ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ಗೀತಾಚಂದ್ರ ಅವರನ್ನು ಸನ್ಮಾನಿಸಲಾಯಿತು.
ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಮತ್ತು ಸದಸ್ಯರಿಗೆ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಾರ್ಥನೆ ಶೋಭಾ ಆಚಾರ್ಯ ನೆರವೇರಿಸಿ, ಮಂಡಳಿಯ ಮಾಜಿ ಅಧ್ಯಕ್ಷೆ ಜ್ಯೋತಿ ರವಿ ಸ್ವಾಗತಿಸಿದರು. ಕಾರ್ಯದರ್ಶಿ ಗೀತಾ ಚಂದ್ರ ಪ್ರತಿಭಾ ಪುರಸ್ಕಾರ ಮತ್ತು ಅಕ್ಷತಾ ಪ್ರಶಾಂತ್ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ಮಾಜಿ ಅಧ್ಯಕ್ಷೆ ರಮಾ ನವೀನ್ ಧನ್ಯವಾದ, ಕೋಶಾಧಿಕಾರಿ ಜ್ಯೋತಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು.