ಕರಾವಳಿಯಲ್ಲಿ ತಲೆ ಎತ್ತಿದ ರೌಡಿಸಂ!
* ಸುರತ್ಕಲ್: 24 ತುಂಡು ಮಾಡುವೆ ಎಂದು ಯುವಕನಿಗೆ ಬೆದರಿಕೆ
* ಮಂಗಳೂರು: ಮತ್ತೆ ರೌಡಿಶೀಟರ್ಗಳ ತಲ್ವಾರ್ ಕಾಳಗ!
NAMMUR EXPRESS NEWS
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ವಾಸವಾಗಿರುವ ಓರ್ವ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಎಂದು ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. ಮುಸ್ಲಿಂ ಸಮಾಜದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾಳೆ.
ಆರೋಪಿ ಯುವತಿಯ ಫೇಸ್ಬುಕ್ ಖಾತೆ ಹ್ಯಾಕ್ ಮಾಡಿದ್ದಾನೆ.ಅದರ ಮೂಲಕ ಆಕೆಯ ಸಹೋದರನಿಗೆ ಬೆದರಿಕೆ ಸಂದೇಶ ಮತ್ತು ಯುವತಿಗೆ ಮಾನಸಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್ ಪೊಲೀಸರು ಸದಾಶಿವನಗರದ ಶಾರಿಕ್ ನೂರ್ಜಹಾನ್ ಎಂಬುವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಯುವತಿಯ ಸಹೋದರಿನಿಗೆ ನಿರಂತರ ಬೆದರಿಕೆ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಡೆತ್ನೋಟ್ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
* ಮಂಗಳೂರು: ರೌಡಿಶೀಟರ್ ತಲ್ವಾರ್ ಕಾಳಗ
ಮಂಗಳೂರು: ಮಂಗಳೂರಲ್ಲಿ ನಡುರಾತ್ರಿ ಯುವಕರ ಗುಂಪಿನ ನಡುವೆ ತಲ್ವಾರ್ ಕಾಳಗ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಮಾರಣಾಂತಿಕ ಗಾಯವಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಘಟನೆ ಸಂಬಂಧ ಹಲ್ಲೆ ನಡೆಸಿದ ಆರೋಪಿಗಳ ಪತ್ತೆಗೆ ಡಿ.ವೈ.ಎಸ್ಪಿ ನೇತ್ರತ್ವದಲ್ಲಿ ಎರಡು ತಂಡಗಳ ರಚನೆ ಮಾಡಲಾಗಿದೆ. ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಹಲ್ಲೆ ನಡೆಸಿದ ಆರೋಪಿಗಳೆಂದು ಗುರುತಿಸಲಾಗಿದೆ.ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು ಮುಂದೆ ಇದು ಮರುಕಳಿಸದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಇಲಾಖೆಯೊಳಗೆ ಚರ್ಚಿಸುತ್ತೇವೆ ಎಂದು ದಕ್ಷಿಣ ಕನ್ನಡ ಎಸ್.ಪಿ ಯತೀಶ್.ಎನ್ ಹೇಳಿದ್ದಾರೆ.