- ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್
- 3 ದಿನ ಗಣೇಶ ಇಡಬಹುದು, ಷರತ್ತುಗಳು ಅನ್ವಯ!
- ಮೆರವಣಿಗೆ, ಕಾರ್ಯಕ್ರಮಕ್ಕೆ ಇಲ್ಲ ಅನುಮತಿ
- ಕರೋನಾ ಹೆಚ್ಚಿರುವ ಜಿಲ್ಲೆಯಲ್ಲಿ ಅವಕಾಶ ಇಲ್ಲ
NAMMUR EXPRESS
ಬೆಂಗಳೂರು: ಅಂತೂ ಇಂತೂ ಗಣೇಶನ ಹಬ್ಬಕ್ಕೆ ಅನುಮತಿ ಸಿಕ್ಕಿದೆ. ಆದರೆ ಅಬ್ಬರದ ಗಣೇಶ ಹಬ್ಬ ಆಚರಣೆ ಮಾಡುವ ಹಾಗಿಲ್ಲ. ಇನ್ನು ಆರ್ಕೆಸ್ಟ್ರಾ, ಹಾಸ್ಯ, ಕಾರ್ಯಕ್ರಮ ಮಾಡುವಂತಿಲ್ಲ!.
ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಅದರಲ್ಲೂ 3 ದಿನಗಳಿಗೆ ಆಚರಣೆ ಸೀಮಿತಗೊಳಿಸಲಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ನಡೆದ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ.
ಏಕೆ ಈ ಆಚರಣೆ?: ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ 3 ದಿನ ಮಾತ್ರ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದ್ದು, ಮನೋರಂಜನೆ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ, ಪ್ರತಿಷ್ಠಾಪನೆ ಮಾಡಬಹುದು. ಆದರೆ ಮೆರವಣಿಗೆ ಮಾಡುವಂತಿಲ್ಲ. ಸ್ಟೇಜ್ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ. ಜಿಲ್ಲಾಡಳಿತ ಸೂಚಿಸಿದ ಸ್ಥಳದಲ್ಲೇ ಗಣೇಶ ವಿಸರ್ಜನೆ ಮಾಡಬೇಕು ಎಂದು ಹೇಳಲಾಗಿದೆ.
ಕಠಿಣ ಕ್ರಮ?: ಕಳೆದೊಂದು ತಿಂಗಳಿನಿಂದಲೂ ಗಣೇಶೋತ್ಸವ ಆಚರಣೆಯ ಕುರಿತು ಸಾರ್ವಜನಿಕವಾಗಿ ಸಾಷ್ಟು ಚರ್ಚೆಗಳು ನಡೆದಿತ್ತು. ಕೊರೊನಾ ಸಂಕಷ್ಟದ ನಡುವಲ್ಲೇ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಬೇಕೆ, ಇಲ್ಲಾ ಬೇಡವೇ ಅನ್ನೋ ಕುರಿತು ಪರ, ವಿರೋಧದ ಮಾತುಗಳು ಕೇಳಿಬಂದಿತ್ತು.
ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದೆ. ಅಲ್ಲದೇ ಕೇರಳ ಹಾಗೂ ಮಹಾರಾಷ್ಟ್ರ ಗಡಿಭಾಗದ ಜಿಲ್ಲೆಗಳಲ್ಲಿಯೂ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆ ರಾಜ್ಯ ಸರಕಾರ ನಿಷೇಧ ಹೇರಿದೆ. ಒಂದು ವೇಳೆ ಆಯೋಜಕರು ಕಾನೂನು ಮೀರಿದರೆ ಕಠಿಣ ಕ್ರಮ ತೆಗೆದು ಕೊಳ್ಳುವ ಸಾಧ್ಯತೆ ಇದೆ.
ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.