ಕುವೆಂಪು ವಿಶ್ವವಿದ್ಯಾಲಯದ ಎಡವಟ್ಟು: ವಿದ್ಯಾರ್ಥಿಗಳಿಗೆ ಬಿಕ್ಕಟ್ಟು!
– ಸ್ನಾತಕೊತ್ತರ ಪದವಿ ಕೋರ್ಸ್ಗಳ ಪ್ರವೇಶ ಆಫ್ಲೈನ್ ಮೂಲಕ ಅರ್ಜಿ
– ಪೋರ್ಟಲ್ ಮೂಲಕ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ಸಮಸ್ಯೆ
– ಬಿ.ಎಡ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ ಅಂಕಪಟ್ಟಿ!?
NAMMUR EXPRESS NEWS
ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯವು 2024-25ನೇ ಸಾಲಿಗೆ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಪ್ರವೇಶಾತಿ ಅರ್ಜಿಗಳನ್ನು ಉಲ್ಲೇಖಿತ(1)ರ ಅಧಿಸೂಚನೆಯಲ್ಲಿ ಯು.ಯು.ಸಿ.ಎಂ.ಎಸ್. ಪೋರ್ಟಲ್ನಲ್ಲಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :30-10-2024ರವರೆಗೆ ಎಂದು ನಿಗದಿಗೊಳಿಸಲಾಗಿತ್ತು. ಆದರೆ ಕೆಲವೊಂದಿಷ್ಟು ತಾಂತ್ರಿಕ ಸಮಸ್ಯೆಗಳು ಉಂಟಾಗಿರುವುದರಿಂದ ವಿದ್ಯಾರ್ಥಿಗಳಿಗೆ ಬಾರಿ ತೊಂದರೆ ಉಂಟಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಯು.ಯು.ಸಿ.ಎಂ.ಎಸ್. ಪೋರ್ಟಲ್ ಮೂಲಕ ಪ್ರವೇಶಾತಿ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ತೊಂದರೆಯಾಗಿದ್ದು, ಉಲ್ಲೇಖಿತ (2)ರ ಮಾನ್ಯ ಕುಲಪತಿಗಳ ಅನುಮೋದನೆ ಮೇರೆಗೆ, 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೊತ್ತರ ಪದವಿ/ ಸ್ನಾತಕೊತ್ತರ ಡಿಪ್ಲೋಮಾ / ಸರ್ಟಿಫೀಕೇಟ್ ಕೋರ್ಸ್ಗಳ ಪ್ರವೇಶಾತಿಗೆ ವಿದ್ಯಾರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ:05-11-2024 ಹಾಗೂ ಅರ್ಜಿದಾರರು ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ ವಿಭಾಗಕ್ಕೆ ಕಡ್ಡಾಯವಾಗಿ ದಿನಾಂಕ: 06-11-2024ರ ಸಂಜೆ 05.00 ಗಂಟೆಯೊಳಗಾಗಿ ಸಲ್ಲಿಸಲು ಅನುಮತಿ ನೀಡಲಾಗಿದೆ. ಆಫ್ಲೈನ್ ಮೂಲಕ ಬಂದ ಅರ್ಜಿಗಳನ್ನು ಕಡ್ಡಾಯವಾಗಿ ಯು.ಯು.ಸಿ.ಎಂ.ಎಸ್. ಪೋರ್ಟಲ್ನಲ್ಲಿ ಆಯಾ ವಿಭಾಗಾಧ್ಯಕ್ಷರುಗಳು ಅಪ್ ಲೋಡ್ ಮಾಡಲು ತಿಳಿಸಲಾಗಿದೆ.
ಸಮಸ್ಯೆ ಸರಿಪಡಿಸದೇ ಆಫ್ಲೈನ್ ಅರ್ಜಿ ಸಲ್ಲಿಸಲು ಸೂಚನೆ!
ಆನ್ಲೈನ್ ಅರ್ಜಿ ಸಲ್ಲಿಕೆಯಲ್ಲಾಗಿರುವ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸದೇ ಆಫ್ಲೈನ್ ಗಳ ಮೂಲಕ ಅಂದರೆ ಕುದ್ದು ಕುವೆಂಪು ವಿಶ್ವವಿದ್ಯಾಲಯಕ್ಕೇ ಬಂದು ಅರ್ಜಿಯನ್ನು ಸಲ್ಲಿಸಿ ಎಂದಿರುವುದು ಅನೇಕ ವಿದ್ಯಾರ್ಥಿಗಳಿಗೆ ತೊಂದರೆ ಎದುರಾಗುತ್ತದೆ ಏಕೆಂದರೆ ಗ್ರಾಮೀಣ ಭಾಗದಿಂದ ನಗರ ಭಾಗಕ್ಕೆ ಬರಬೇಕಾದರೆ ಸಾಕಷ್ಟು ಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ಖರ್ಚು ವೆಚ್ಚಗಳು ಉಂಟಾಗುತ್ತದೆ. ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಗಳಿದ್ದರೆ ಗ್ರಾಮೀಣ ಭಾಗದಲ್ಲಿರುವಂತಹ ವಿದ್ಯಾರ್ಥಿಗಳು ಹತ್ತಿರದಲ್ಲಿರುವ ಸೇವಾಕೇಂದ್ರಗಳಿಗೆ ಹೋಗಿ ಅವರು ಅರ್ಜಿಸಲ್ಲಿಸುತ್ತಿದ್ದರು ಆದರೆ ಕುವೆಂಪು ವಿಶ್ವವಿದ್ಯಾಲಯದ ಈ ನಿರ್ಧಾರದಿಂದ ಸಮಸ್ಯೆ ಇನ್ನೂ ಹೆಚ್ಚಾಗಿದೆ. ವಿದ್ಯಾರ್ಥಿಗಳಿಗೆ ಆಫ್ಲೈನ್ನಲ್ಲಿ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಸಾಕಷ್ಟು ರೀತಿಯ ತೊಂದರೆಗಳಿದ್ದು ಆದ್ದರಿಂದ ಪ್ರತೀ ತಾಲೂಕಿನಲ್ಲಿ ಯಾವುದಾದರೂ ಒಂದು ಸರ್ಕಾರಿ ಕಾಲೇಜನ್ನು ನಿಗದಿಪಡಿಸಿ ಇದಕ್ಕೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸುವ ಪ್ರಕ್ರಿಯೆವನ್ನಾದರೂ ಮಾಡಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ.
ಇನ್ನೂ ಕೈಸೇರದ ಬಿಎಡ್ ಅಂಕಪಟ್ಟಿ?
ಬಿಎಡ್ ಫಲಿತಾಂಶ ಪ್ರಕಟವಾಗಿ ಹಲವು ದಿನಗಳೇ ಕಳೆದಿದ್ದು ಆದರೆ ಇನ್ನೂ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಲಭಿಸಿಲ್ಲ. ಇದರಿಂದ ಬಿಎಡ್ ಮುಗಿಸಿದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆ ಎದುರಾಗಿದೆ. ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್,ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅಂಕಪಟ್ಟಿ ಇಲ್ಲದೇ ಸಾಕಷ್ಟು ರೀತಿಯ ಸಂಕಷ್ಟಗಳನ್ನ ಎದುರಿಸುತ್ತಿದ್ದಾರೆ ಆದ್ದರಿಂದ ಕುವೆಂಪು ವಿಶ್ವವಿದ್ಯಾಲಯ ಇದರ ಕಡೆ ಕೂಡಲೇ ಗಮನಹರಿಸಿ ಆಗಿರುವ ತೊಂದರೆ ಸರಿಪಡಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.