ರಾಜ್ಯದಲ್ಲಿ ಕಡಿಮೆಯಾದ ಮಳೆ: ಚಳಿ ಶುರು!
– ಎಲ್ಲಡೆ ಗಾಢವಾದ ಮಂಜು ಕವಿದ ವಾತಾವರಣ
– ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ
NAMMUR EXPRESS NEWS
ಬೆಂಗಳೂರು: ಎರಡು ವಾರಗಳಿಂದ ರಾಜ್ಯದಲ್ಲಿ ಅಬ್ಬರಿಸಿದ ಮಳೆ ಸದ್ಯ ತಗ್ಗಿದೆ. ಆದರೆ, ನಿರಂತರ ಮಳೆಯಾದ ಪರಿಣಾಮ ಇದೀಗ ದಿಢೀರ್ ಚಳಿಯ ಕಾಟವೂ ಹೆಚ್ಚಾಗಿದೆ. ರಾತ್ರಿಯಿಂದಲೇ ಚಳಿ ಆರಂಭವಾಗುತ್ತಿದ್ದು, ಬೆಳಿಗ್ಗೆ ದಟ್ಟವಾದ ಮಂಜು ಆವರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಡಿಶಾದ ಮೇಲಿನ ವಾಯು ಚಂಡಮಾರುತದ ಪರಿಚಲನೆಯು ಈಗ ಕರಾವಳಿ ಒಡಿಶಾದ ಮೇಲಿದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ವರೆಗೆ ಎತ್ತರದೊಂದಿಗೆ ನೈಋತ್ಯಕ್ಕೆ ವಾಲುತ್ತದೆ ಎಂದು ಹೇಳಲಾಗಿದೆ. ಮತ್ತೊಂದೆಡೆ ಲಕ್ಷದ್ವೀಪ ಪ್ರದೇಶದಿಂದ ಉತ್ತರ ತಮಿಳುನಾಡು ತೀರದವರೆಗೆ ಸಮುದ್ರ ಮಟ್ಟದಿಂದ 4.5 ಮತ್ತು 5.8 ಕಿ.ಮೀ ಎತ್ತರದ ನಡುವಿನ ಟ್ರಫ್ ಕಡಿಮೆ ಗುರುತಿಸಲ್ಪಟ್ಟಿದೆ. ಹಾಗಾಗಿ ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಹವಾಮಾನ ಪರಿಸ್ಥಿತಿ ಈ ರೀತಿ ಇರಲಿದೆ. ಮುಂದಿನ 2 ದಿನಗಳಲ್ಲಿ ರಾಜ್ಯದಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಮುಂದುವರಿಯಲಿದೆ. ಹಾಗಾಗಿ ಮುಂದಿನ 2 ದಿನಗಳಲ್ಲಿ ಕರ್ನಾಟಕದ ಒಳಭಾಗದಲ್ಲಿ ಬೆಳಗಿನ ಜಾವದಲ್ಲಿ ಗಾಢವಾದ ಮಂಜು ಅಥವಾ ಮಬ್ಬಿನ ಸಾಧ್ಯತೆ ಇಂದೆ ಎಂದು ಹವಾಮಾನ ಇಲಾಖೆ ಹೇಳಿದೆ.
– ಅಲ್ಲಲ್ಲಿ ಮಳೆ ಸಾಧ್ಯತೆ
ಉತ್ತರ ಒಳನಾಡಿನ ಮತ್ತು ಕರಾವಳಿ ಮತ್ತು ದಕ್ಷಿಣ ಒಳನಾಡಿನದ ಉಳಿದ ಜಿಲ್ಲೆಗಳ ಮೇಲೆ ಒಣ ಹವಾಮಾನದ ಸಾಧ್ಯತೆ. ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮಂಗಳವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವಾಮಾನದ ಸಾಧ್ಯತೆ ಇದೆ ಎನ್ನಲಾಗಿದೆ.
ಸಾಧಾರಣ ಮಳೆ ಸಾಧ್ಯತೆ
ನವೆಂಬರ್ 30ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವಾಮಾನ ಇರಲಿದೆ. ಅಕ್ಟೋಬರ್ 31ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.
ನವೆಂಬರ್ 1ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಸೇರಿದಂತೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.
ಬೀದರ್, ಕಲಬುರ್ಗಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವಾಮಾನದ ಸಾಧ್ಯತೆ. ನವೆಂಬರ್ 2ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ಆಕಾಶ ಕಂಡುಬರಲಿದೆ. ಒಣ ಹವಾಮಾನದೊಂದಿಗೆ ಕೆಲವು ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ತುಂಬಾ ಸಾಧ್ಯತೆ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಸೆಲ್ಸಿಯಸ್ ಹಾಗೂ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.