ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ
– ನ.1 ರಿಂದ ರಾಜ್ಯದ ಕೆಲವೆಡೆ ಮತ್ತೆ ಮಳೆ ಅಬ್ಬರಿಸುವ ಸಾಧ್ಯತೆ
– ಯೆಲ್ಲೋ ಅಲರ್ಟ್ ಅನ್ನ ಹವಾಮಾನ ಇಲಾಖೆ ಪೋಷಣೆ
NAMMUR EXPRESS NEWS
ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ, ನ.1ರಿಂದ ರಾಜ್ಯದ ಕೆಲವೆಡೆ ಮತ್ತೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
– ಎಲ್ಲೆಲ್ಲಿ ಮಳೆಯಾಗಲಿದೆ?
ನ.1 ರಿಂದ ಎರಡು ದಿನ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು, ನ.2ರಂದು ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉಳಿದೆಡೆ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ರಾಜ್ಯದಲ್ಲಿ ವಾಡಿಕೆಗಿಂತಲು ಹೆಚ್ಚು ಮಳೆ : ಇನ್ನು, ಅ.1ರಿಂದ 28ರವರೆಗೆ ರಾಜ್ಯಾದ್ಯಂತ ವಾಡಿಕೆಗಿಂತಲು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆಯಂತೆ 120 ಮಿ.ಮೀ ಮಳೆಯಾಗಬೇಕಿತ್ತು. ಆದರೆ, 181 ಮಿ.ಮೀ ಮಳೆಯಾಗಿದೆ. ವಾಡಿಕೆಗಿಂತ ಶೇ.51 ಅಧಿಕ ವರ್ಷಧಾರೆಯಾಗಿದೆ. ಜೂ.1ರಿಂದ ಸೆ.30ರವರೆಗೆ ರಾಜ್ಯದಲ್ಲಿ 978 ಮಿಮೀ ಮಳೆಯಾಗಿದೆ.