- ಅಡಿಕೆಗೆ ಸೂಕ್ತ ಬೆಲೆ ಕೊಡಿಸಲು ದಶಕದ ಹೋರಾಟ
- ರಾಜ್ಯ, ಕೇಂದ್ರ ಸರಕಾರಗಳಿಗೆ ಹಲವು ನಿಯೋಗ ಭೇಟಿ
NAMMUR EXPRESS
ಶಿವಮೊಗ್ಗ: ಮಲೆನಾಡಲ್ಲಿ ಕೆಂಪಡಿಕೆ ದರ 60,000 ರೂ ದಾಟಿದೆ. ಕಳೆದ ಕೆಲವು ವರ್ಷದಲ್ಲೇ ಅತೀ ಹೆಚ್ಚು ದರ ದಾಖಲಾಗಿದೆ. ಈ ದರ ಬರಲು ಹಲವು ಹೋರಾಟಗಳು ಫಲ ನೀಡಿವೆ. ರೈತ ಸಂಘಟನೆಗಳು, ಎಲ್ಲಾ ಪಕ್ಷಗಳು ಹೋರಾಟ ನಡೆಸಿವೆ.
ಅದರಂತೆ ಗೃಹಸಚಿವ, ತೀರ್ಥಹಳ್ಳಿ ಶಾಸಕ, ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಆರಗ ಜ್ಞಾನೇಂದ್ರ ಕೂಡ ಹಲವು ಭೇಟಿ ಹಲವು ನಿಯೋಗ ಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು. ಜೊತೆಗೆ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ ಎಂಬುದನ್ನು ವೈಜ್ಞಾನಿಕವಾಗಿ ಸಂಶೋಧನೆ ಕೂಡ ಮಾಡಿಸಿದ್ದರು. ಇದೀಗ ಅಡಿಕೆಗೆ ಉತ್ತಮ ಮಾರುಕಟ್ಟೆ ಹಾಗೂ ಸ್ಥಿರ ಬೆಲೆ ಸಿಕ್ಕಿದೆ. ಅಡಿಕೆ ಕ್ಯಾನ್ಸರ್ ಕಾರಕ ಎಂಬ ಕಾರಣಕ್ಕಾಗಿ ನ್ಯಾಯಾಲಯದಲ್ಲಿ ಅಡಿಕೆ ನಿಷೇಧದ ವಿರುದ್ಧ ಹೋರಾಡುತ್ತಿರುವವರಲ್ಲಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದ ಜತೆ ಅಡಿಕೆ ಟಾಸ್ಕ್ ಫೋರ್ಸ್ ಪಾಲು ಇದೆ.
ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.
Related Posts
Add A Comment