ಕರಾವಳಿ ನ್ಯೂಸ್
– ಕಾಸರಗೋಡು: ದೀಪಾವಳಿ ಹಬ್ಬ ಮುನ್ನ,ಪಟಾಕಿ ಕಿಡಿಯಿಂದ 150ಕ್ಕೂ ಹೆಚ್ಚು ಮಂದಿ ಗಾಯ!
– ಪುತ್ತೂರು: ಲವ್ ಜಿಹಾದ್ – ಸಮೀರ್’ಗೆ ಶಿಕ್ಷೆ ನೀಡುವಂತೆ, ಪತ್ರ ಕಾಣಿಕೆ ಹುಂಡಿಯಲ್ಲಿ ಪತ್ತೆ.!!
– ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
NAMMUR EXPRESS NEWS
ಕಾಸರಗೋಡು: ದೀಪಾವಳಿ ಹಬ್ಬಕ್ಕೆ ಮುನ್ನ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೆರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ದೇವಸ್ಥಾನವೊಂದರ ಉತ್ಸವ ವೇಳೆ ಕಳೆದ ಮಧ್ಯರಾತ್ರಿ ನಡೆದಿದೆ.
ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿ ಉರಿದು 150ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೇವಸ್ಥಾನದ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
* ಪುತ್ತೂರು: ಲವ್ ಜಿಹಾದ್ ಕಾಟ – ಸಮೀರ್’ಗೆ ಶಿಕ್ಷೆ ನೀಡುವಂತೆ, ಪತ್ರ ಕಾಣಿಕೆ ಹುಂಡಿಯಲ್ಲಿ ಪತ್ತೆ.!!
ಪುತ್ತೂರು: ದೇಶಾದ್ಯಂತ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪುತ್ತೂರಿನಲ್ಲಿ ಹೊಸ ಘಟನೆಯೊಂದು ಬೆಳಕಿಗೆ ಬಂದಿದೆ. ಪುತ್ತೂರಿನ ಪ್ರಸಿದ್ಧ ಮಹಾಲಿಂಗೇಶ್ವರ ದೇವಾಲಯದ ಕಾಣಿಕೆ ಹುಂಡಿ ತೆರೆಯುವ ಸಂದರ್ಭ ಲವ್ ಜಿಹಾದ್ ಬಲೆಗೆ ಬಿದ್ದ ಯುವತಿಯೋರ್ವಳು ದೇವರಿಗೆ ಬರೆದ ಪತ್ರವೊಂದು ಸಿಕ್ಕಿದ್ದು ಹೊಸ ಸಂಚಲನ ಸೃಷ್ಟಿ ಮಾಡಿದೆ.
ಕಾಣಿಕೆ ಹುಂಡಿ ಲೆಕ್ಕಾಚಾರದ ವೇಳೆ ಸಿಕ್ಕಿದ ಚೀಟಿಯಲ್ಲಿ “ಸಮೀರ್ ಅನ್ನುವವನು ನನ್ನ ಜೀವನ ಹಾಳು ಮಾಡಿದ್ದಾನೆ. ಇವತ್ತು ನಾನು ನನ್ನ ಮಗಳು ಬೀದಿಯಲ್ಲಿ ಇದ್ದೇವೆ.. ಅವನ ಜೀವನ ಕೂಡ ಹಾಳಗಬೇಕು ಅವನಿಗೆ ಮದುವೆಯಾಗಲು ಹುಡುಗಿ ಸಿಗಬಾರದು – ಓ ದೇವರೆ ಇದು ನನ್ನ ಪ್ರಾರ್ಥನೆ ” ಎಂದು ಬರೆಯಲಾಗಿದೆ.
ಇತಿಹಾಸ ಪ್ರಸಿದ್ಧವಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಅನೇಕ ಕಾರಣಿಕದ ಸಂಗತಿಯನ್ನು ಒಳಗೊಂಡಿದ್ದು, ಹತ್ತೂರ ಒಡೆಯನಲ್ಲಿ ತಮ್ಮ ಮನದಾಳದ ಮಾತನ್ನು ಚೀಟಿ ಮೂಲಕ ತಿಳಿಸಿದ್ದಾರೆ. ಸದ್ಯ ಈ ಪ್ರಕರಣದ ಮೂಲಕ ಮತ್ತೊಂದು ಲವ್ ಜಿಹಾದ್ ಘಟನೆ ಬೆಳಕಿಗೆ ಬಂದ0ತಾಗಿದೆ. ಈ ಪತ್ರದ ವಿಷಯ ತಿಳಿದು ಪುತ್ತೂರಿನ ಹಿಂದೂ ಸಮಾಜ, ದೇವರೇ ನ್ಯಾಯ ಒದಗಿಸಲಿ ಎಂದು ಮನವಿ ಮಾಡಿದೆ.
* ಪುತ್ತೂರು: ಲವ್ ಜಿಹಾದ್ ಕಾಟ – ಸಮೀರ್’ಗೆ ಶಿಕ್ಷೆ ನೀಡುವಂತೆ, ಪತ್ರ ಕಾಣಿಕೆ ಹುಂಡಿಯಲ್ಲಿ ಪತ್ತೆ.!!
ಬಂಟ್ವಾಳ : ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಅ. 29ರಂದು ತುಂಬೆಯಲ್ಲಿ ನಡೆದಿದೆ. ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ ಅಂಬಾಸಿಡರ್ ಕಾರು ಚಾಲಕ ಬೋಜ ಮೂಲ್ಯ (62) ಮೃತಪಟ್ಟ ವ್ಯಕ್ತಿ. ಅ.11 ರಂದು ರಾತ್ರಿ 7 ರ ಸುಮಾರಿಗೆ ಬೋಜ ಮೂಲ್ಯ ಅವರು ಮನೆಗೆ ಕೋಳಿ ಮಾಂಸ ಖರೀದಿ ಮಾಡಲು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾರು ನಿಲ್ಲಿಸಿ ತಲಪಾಡಿಯ ಚಿಕನ್ ಸ್ಟಾಲ್ ಗೆ ತೆರಳಲು ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿತ್ತು. ಘಟನೆಯಲ್ಲಿ ಅವರಿಗೆ ಕಾಲಿಗೆ ಗಾಯವಾಗಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ. 12 ರಂದು ಅಪಘಾತದ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಇದೀಗ 19 ದಿನಗಳ ಬಳಿಕ ಮನೆಯಲ್ಲಿ ಇವರಿಗೆ ಉಸಿರಾಟದ ತೊಂದರೆ ಕಂಡುಬಂದಿದ್ದು ಇವರನ್ನು ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಅ. 29ರಂದು ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿದೆ.