- ದಾರಿ ಮಧ್ಯ ಹೃದಯಾಘಾತದಿಂದ ವಿಧಿವಶ
- ಕೋಣಂದೂರಿನಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ
- ಮಲೆನಾಡಿನ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ
NAMMUR EXPRESS
ತೀರ್ಥಹಳ್ಳಿ: ನ್ಯಾಷನಲ್ ಎಜುಕೇಷನ್ ಸೊಸೈಟಿ ಕಟ್ಟಿ ಮಲೆನಾಡಿನ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಚಾಪು ಮೂಡಿಸಿದ್ದ ಗಣೇಶ ಮೂರ್ತಿ ಅವರು ಹೃದಯಾಘಾತದಿಂದ ಶನಿವಾರ ಸಂಜೆ ಮೃತರಾಗಿದ್ದಾರೆ.
ಸುಮಾರು 74 ವರ್ಷ ವಯಸ್ಸಿನ ಗಣೇಶ್ ಮೂರ್ತಿ ಅವರು ಶಿವಮೊಗ್ಗದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಭೇಟಿ ನೀಡಿ ವಾಪಾಸ್ ಕೋಣಂದೂರು ಬರುವ ವೇಳೆ ಆನಂದಪುರ ಸಮೀಪ ಎದೆ ನೋವು ಕಾಣಿಸಿಕೊಂಡಿದೆ. ಚಾಲಕ ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೊಸನಗರ ತಾಲೂಕು ಗರ್ತಿಕೆರೆ ಬಳಿಯ ಅಮೃತ ಮೂಲದ ಗಣೇಶಮೂರ್ತಿ ಅವರು ಶರಾವತಿ ಪ್ರಥಮ ದರ್ಜೆ ಕಾಲೇಜಿನ ಅಧ್ಯಾಪಕರಾಗಿ, ನ್ಯಾಶಿನಲ್ ರೆಸಿಡೆನ್ಸಿಯಲ್ ಸ್ಕೂಲ್ ಪ್ರಿನ್ಸಿಪಾಲ್ ಅಗಿ ಸೇವೆ ಸಲ್ಲಿಸುತ್ತಿದ್ದರು. ಕನ್ನಡ ಸಾಹಿತ್ಯ ಪರಿಷತ್ ಹಿರಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಎಲ್ಲಾ ಶಿಕ್ಷಣ, ಸಾಹಿತ್ಯ, ಕಲೆ, ಸಮಾಜ ಪರ ಕೆಲಸಗಳಲ್ಲಿ ಅವರು ತಮ್ಮನ್ನು ತೊಡಗಿಸಿಕೊಂಡಿದ್ದರು. ನ್ಯಾಶಿನಲ್ ಎಜುಕೇಷನ್ ಸೊಸೈಟಿ ರಿಜಿಸ್ಟರ್ ಆಗಿದ್ದರು.
ಅನೇಕ ಬರಹಗಳ ಮೂಲಕ ಅವರು ಗಮನ ಸೆಳೆದಿದ್ದರು. ಅವರ ಸೇವೆಗೆ ನೂರಾರು ಪ್ರಶಸ್ತಿ, ಪುರಸ್ಕಾರಗಳು ಬಂದಿದ್ದವು. ಹೈಸ್ಕೂಲ್ ಶಿಕ್ಷಕರಾಗಿ ಸೇವೆ ಶುರು ಮಾಡಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯರು ಪರಿಷತ್ತಿನ ಪೋಷಕರು ಆಗಿದ್ದು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮಾಡಿ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ರಾಜ್ಯ ಮಟ್ಟದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಕೇಂದ್ರ ಸ್ಥಾನ ಎಂಬ ಹೆಗ್ಗಳಿಕೆಗೆ ಕಾರಣರಾಗಿದ್ದರು.
ಗಣ್ಯರ ಕಂಬನಿ: ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮದನ್ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
ಪ್ರೊ.ಗಣೇಶಮೂರ್ತಿ ಅವರು ವಿಧಿವಶರಾಗಿದ್ದು
ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿಷಾದವನ್ನು ವ್ಯಕ್ತಪಡಿಸಲಾಗಿದೆ. ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಸತೀಶ್ ಆಡಿನಸರ(ಅಧ್ಯಕ್ಷರು. ಕನ್ನಡ ಸಾಹಿತ್ಯ ಪರಿಷತ್ತು. ತೀರ್ಥಹಳ್ಳಿ) ತಿಳಿಸಿದ್ದಾರೆ.
ಮಲೆನಾಡಿನ ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಕು ನೀಡಿ ಗ್ರಾಮೀಣ ಭಾಗದಲ್ಲೂ ಅತ್ಯುತ್ತಮ ಗುಣ ಮಟ್ಟದ ಶಿಕ್ಷಣ ನೀಡುವಲ್ಲಿ ಅವರ ನಿರಂತರ ಪ್ರಯತ್ನ ಅಪಾರ. ಅವರ ಸಾವು ಶಿಕ್ಷಣ ಕ್ಷೇತ್ರಕ್ಕೆ ತುಂಬಿಲಾರದ ನಷ್ಟ ಎಂದು ತುಂಗಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಗಣಪತಿ ಕಂಬನಿ ವ್ಯಕ್ತಪಡಿಸಿದ್ದಾರೆ.
ಗೃಹ ಸಚಿವರ ಕಂಬನಿ!: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಂತಾಪ ವ್ಯಕ್ತಪಡಿಸಿದ್ದು, ಅವರ ಸಂತಾಪ ಅಂಗವಾಗಿ ಭಾನುವಾರ ಗೃಹ ಸಚಿವರ ಮನೆಯಲ್ಲಿ ಜನತಾ ದರ್ಶನ ರದ್ದುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಎಲ್ಲರಿಗೂ ಮಾರ್ಗದರ್ಶಕರು: ತೀರ್ಥಹಳ್ಳಿಯ ಬಹುತೇಕ ಕಾರ್ಯಕ್ರಮಗಳಿಗೆ ಭೇಟಿ ನೀಡಿ ಸಲಹೆ ನೀಡುತ್ತಿದ್ದ ಗಣೇಶಮೂರ್ತಿ ಅವರು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ನಮ್ಮೂರ್ ಎಕ್ಸ್ಪ್ರೆಸ್ ಮಾಧ್ಯಮದ ಮಾರ್ಗದರ್ಶಕರೂ ಆಗಿದ್ದು ಅವರ ಸಾವಿಗೆ ನಮ್ಮೂರ್ ಎಕ್ಸ್ಪ್ರೆಸ್ ಸಂತಾಪ ಸೂಚಿಸುತ್ತದೆ.