- ಕೋಣಂದೂರಿನಲ್ಲಿ ಅಂತಿಮ ದರ್ಶನ: ಗಣ್ಯರ ಸಂತಾಪ
- ಮನೆಗೆ ತೆರಳಿ ಅಂತಿಮ ದರ್ಶನ ಪಡೆದ ಗೃಹ ಸಚಿವ
NAMMUR EXPRESS
ತೀರ್ಥಹಳ್ಳಿ: ಮಲೆನಾಡಿನ ಖ್ಯಾತ ಶಿಕ್ಷಣ ತಜ್ಞ, ಹೃದಯಾಘಾತದಿಂದ ಮೃತಪಟ್ಟ ನ್ಯಾಷನಲ್ ಎಜುಕೇಷನ್ ಸೊಸೈಟಿ ಪ್ರಮುಖರು, ರಾಷ್ಟ್ರೀಯ ವಸತಿ ಶಾಲೆ ಪ್ರಿನ್ಸಿಪಾಲ್ ಪ್ರೊ. ಗಣೇಶ ಮೂರ್ತಿ ಅವರು ನೆನಪಿನ ಪುಟಕ್ಕೆ ಜಾರಿದ್ದಾರೆ.
ಶನಿವಾರ ಸಂಜೆ ಹೃದಯಾಘಾತದಿಂದ ಆಯನೂರು ಬಳಿ ಮೃತಪಟ್ಟ ಅವರ ಪಾರ್ಥಿವ ಶರೀರವನ್ನು ಭಾನುವಾರ ಬೆಳಿಗ್ಗೆ ಕೋಣಂದೂರು ಶಾಲೆ ಅವರಣಕ್ಕೆ ತರಲಾಗಿದ್ದು, ನೂರಾರು ಮಂದಿ ಅಂತಿಮ ದರ್ಶನ ಪಡೆದರು. ಇಡೀ ಕೋಣಂದೂರು ಮೌನಕ್ಕೆ ಜಾರಿತ್ತು.
ಗಣೇಶ ಮೂರ್ತಿ ಅವರ ಒಡನಾಡಿಗಳು, ಕೋಣಂದೂರಿನ ಗ್ರಾಮಸ್ಥರು, ಶಾಲಾ ಸಿಬ್ಬಂದಿ, ಸಾವಿರಾರು ವಿದ್ಯಾರ್ಥಿಗಳು, ಶಾಲಾ ಮಕ್ಕಳು ಕಂಬನಿ ಮಿಡಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವರು ಅಮೃತದ ಔಕ ಗ್ರಾಮದ ಸ್ವಗೃಹಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.
ದೆಹಲಿಯಿಂದ ಮಗಳು ಬಂದ ಬಳಿಕ ಸಂಜೆ ತವರಲ್ಲಿ ಅಂತ್ಯ ಸಂಸ್ಕಾರ ನಡೆಯಿತು. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಸೇರಿ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಮಲೆನಾಡಿನ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಚಾಪು ಮೂಡಿಸಿದ್ದ ಗಣೇಶ ಮೂರ್ತಿ(75) ಅವರು ಶನಿವಾರ ಸಂಜೆ ಶಿವಮೊಗ್ಗದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಭೇಟಿ ನೀಡಿ ವಾಪಾಸ್ ಕೋಣಂದೂರು ಬರುವ ವೇಳೆ ಆಯನೂರು ಸಮೀಪ ಎದೆ ನೋವು ಕಾಣಿಸಿಕೊಂಡಿದೆ. ಚಾಲಕ ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯ ಮೃತಪಟ್ಟಿದ್ದರು.
ಹೊಸನಗರ ತಾಲೂಕು ಗರ್ತಿಕೆರೆ ಬಳಿಯ ಅಮೃತ ದ ಔಕ ಮೂಲದ ಗಣೇಶಮೂರ್ತಿ ಅವರು ಶರಾವತಿ ಪ್ರಥಮ ದರ್ಜೆ ಕಾಲೇಜಿನ ಅಧ್ಯಾಪಕರಾಗಿ, ನ್ಯಾಶಿನಲ್ ರೆಸಿಡೆನ್ಸಿಯಲ್ ಸ್ಕೂಲ್ ಪ್ರಿನ್ಸಿಪಾಲ್ ಅಗಿ ಸೇವೆ ಸಲ್ಲಿಸುತ್ತಿದ್ದರು. ಕನ್ನಡ ಸಾಹಿತ್ಯ ಪರಿಷತ್ ಹಿರಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಕೋಣಂದೂರಿನಲ್ಲಿ ಬೆಳಿಗ್ಗೆ 10:30ರಿಂದ 1 ಗಂಟೆವರೆಗೆ ಅಂತಿಮದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.
ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಸ್. ಎನ್. ನಾಗರಾಜ, ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಗಿರಿರಾಜ್ ಗೌಡ ಸೇರಿ ಗಣ್ಯರು ಅಂತಿಮ ದರ್ಶನ ಪಡೆದರು.
ಕೋಣಂದೂರು, ಅಮೃತ ಸ್ತಬ್ದ!
ಗಣೇಶಮೂರ್ತಿ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಕೋಣಂದೂರು ಪಟ್ಟಣದ ಎಲ್ಲಾ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು ಮುಚ್ಚಿದ್ದರು. ಗರ್ತಿಕೆರೆ, ಅಮೃತದಲ್ಲೂ ಕೂಡ ಅಂಗಡಿಗಳು ಮುಚ್ಚಿದ್ದವು.
ರಾಜ್ಯದ ಮುಂಚೂಣಿ ಮಾಧ್ಯಮ ಸಂಸ್ಥೆ ನಮ್ಮೂರ್ ಎಕ್ಸ್ಪ್ರೆಸ್. ರಾಜ್ಯದ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.