ವಕ್ಫ್ ಕಾಯ್ದೆ ವಿರುದ್ಧ ತೀರ್ಥಹಳ್ಳಿಯಲ್ಲಿ ಬಿಜೆಪಿ ಬೃಹತ್ ಹೋರಾಟ
– ಶಾಸಕ ಆರಗ ಜ್ಞಾನೇಂದ್ರ ಸೇರಿ ಪ್ರಮುಖರು ಹಾಜರ್
– ರಾಜ್ಯ ಸರ್ಕಾರದ ವಿರುದ್ಧ ಆರಗ ಕೆಂಡಾಮಂಡಲ
NAMMUR EXPRESS NEWS
ತೀರ್ಥಹಳ್ಳಿ: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಅ. 4ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪ ಸರ್ಕಲ್ ಬಿಜೆಪಿ ಕಚೇರಿಯಿಂದ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಬೆಳ್ಳಿಗೆ 11-30 ತಾಲ್ಲೂಕು ಕಚೇರಿಯ ಎದುರು ಪ್ರತಿಭಟನೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಗೃಹ ಸಚಿವರು, ಶಾಸಕರು ಆದ ಆರಗ ಜ್ಞಾನೇಂದ್ರ ಇವರು ಎಲ್ಲರೂ ವಿಶೇಷವಾದ ದೀಪಾವಳಿ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ತೀರ್ಥಹಳ್ಳಿ ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸವೇ ಸರಿ. ವಕ್ಫ್ ಕಾಯ್ದೆ ವಿರುದ್ಧ ಬಹಳಷ್ಟು ಚರ್ಚೆ ನಡೆಯುತ್ತಿದ್ದು, ಇದು ಸಂವಿಧಾನವನ್ನು ಮೀರುವ ಅಧಿಕಾರವನ್ನು ಪಡೆಯುತ್ತಿದೆ. ಕಾಂಗ್ರೆಸ್ ಅಧಿಕಾರದಿಂದ ಈ ದೇಶ ಬಹಳ ದೊಡ್ಡ ಮಟ್ಟದಲ್ಲಿ ದಂಡ ಕಟ್ಟಬೇಕಾದ ಪರಿಸ್ಥಿತಿ ಒದಗಿ ಬಂದಿದೆ. ಬಿಜಾಪುರ ಜಿಲ್ಲೆ ಮಾತ್ರವಲ್ಲದೆ ಮುಕ್ಕಾಲು ಭಾಗ ಜಿಲ್ಲೆಗಳು ವಕ್ಫ್ ಕಾಯ್ದೆ ಸೇರ್ಪಡೆಯಾಗಿದೆ. ಇದರೊಂದಿಗೆ ಶಿವಮೊಗ್ಗ ಜಿಲ್ಲೆಯೂ ಸೇರಿದೆ..
ನಾಚಿಕೆ ಇಲ್ಲದ ಕರ್ನಾಟಕ ಸರಕಾರ ಈ ಬಗ್ಗೆ ಯಾವುದೇ ಪ್ರಶ್ನೆ ಮಾಡುತ್ತಿಲ್ಲ ಎಂದು ಆರೋಪಿಸಿದರು. ಸರಕಾರಿ ಶಾಲೆ ಆಸ್ಪತ್ರೆ ಎಲ್ಲವೂ ಬೀದಿಗೆ ಬಂದಿದ್ದರೂ ಪ್ರಶ್ನಿಸುವವರಿಲ್ಲ , ಸಂವಿಧಾನಕ್ಕೆ ಅವಮಾನವಾಗುತ್ತಿದೆ ಎಂದು ಬೊಬ್ಬೆ ಹಾಕುವ ಜನ ಪ್ರತಿಯೊಂದನ್ನು ಪ್ರಶ್ನಿಸುವ ಸರ್ಕಾರ ಸಂವಿಧಾನದ ವಿರುದ್ಧ ಇರುವ ಕಾಯಿದೆ ಖಂಡಿಸಲು ಮೂಕರಾಗಿದ್ದಾರೆಯೇ? ಎಂದು ಪ್ರಶ್ನಿಸಿದರು. ಬಿಜೆಪಿ ಮಂಡಲದ ಅಧ್ಯಕ್ಷ ನವೀನ್ ಹೆದ್ದೂರ್, ಹಿರಿಯ ನಾಯಕ ನಾಗರಾಜ್ ಶೆಟ್ಟಿ, ಕುಕ್ಕೆ ಪ್ರಶಾಂತ್, ರಕ್ಷಿತ್ ಮೇಗರವಳ್ಳಿ, ಸೊಪ್ಪುಗುಡ್ಡೆ ರಾಘವೇಂದ್ರ, ಸಂತೋಷ್ ದೇವಾಡಿಗ, ಬೇಗುವಳ್ಳಿ ಕವಿರಾಜ್, ಸಂದೇಶ್ ಜವಳಿ, ಕಾಸರವಳ್ಳಿ ಶ್ರೀನಿವಾಸ್, ವಿಧಾತ ಅನಿಲ, ಭಾರತಿ ಸುರೇಶ್, ಬೆಂಗಳೂರು ಶಕ್ತಿಕೇಂದ್ರದ ಅಧ್ಯಕ್ಷ ಅರುಣ್ ಶೆಟ್ಟಿ, ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.