ಯುಗದ ಕವಿ ಜಗದ ಕವಿ ಕುವೆಂಪು ಪುಣ್ಯಸ್ಮರಣೆ
– 20ನೇ ಶತಮಾನ ಕಂಡ ಅಪ್ರತಿಮ ಕವಿ
– ಕುವೆಂಪು ಅವರು ನಮ್ಮನ್ನು ಅಗಲಿ 30 ವರ್ಷ
NAMMUR EXPRESS NEWS
ಕುವೆಂಪು ಅವರು ಇಪ್ಪತ್ತನೆಯ ಶತಮಾನ ಕಂಡ ಅದ್ಭುತ ಕವಿಗಳಲ್ಲಿ ಒಬ್ಬರು. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ಕುವೆಂಪು ಅವರ ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904ರಲ್ಲಿ ಜನಿಸಿದರು. ವಿಶ್ವಕ್ಕೆ ವಿಶ್ವಮಾನವ ಸಂದೇಶ ನೀಡಿದವರು.
ಕನ್ನಡದ ಮೊದಲನೆಯ ಜ್ಞಾನಪೀಠ ಪ್ರಶಸ್ತಿಯನ್ನೂ, ಎರಡನೆಯ ರಾಷ್ಟ್ರಕವಿಯಾಗಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು. ತಮ್ಮ ಸಾಹಿತ್ಯ, ವಿಚಾರಧಾರೆ ಮೂಲಕ ನಾಡಿನ ಹೆಸರು ಬೆಳಗಿಸಿದವರು. ತೀರ್ಥಹಳ್ಳಿ ತಾಲೂಕು ಕುಪ್ಪಳಿಯಲ್ಲಿರುವ ಕುವೆಂಪು ಅವರು ಹುಟ್ಟಿದ ಮನೆ ವಸ್ತು ಸಂಗ್ರಹಾಲಯವಾಗಿದೆ. ಅಲ್ಲೇ ಇರುವ ಅವರ ಸಮಾಧಿ ಸ್ಥಳ ಒಂದು ವಿಶಿಷ್ಟ ಸ್ಮಾರಕ. ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ. ನಾಡಿನ ಎಲ್ಲೆಡೆ ಕುವೆಂಪು ಅವರಿಗೆ ನಮನ ಸಲ್ಲಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಅವರ ಕನ್ನಡ ಸೇವೆಗೆ ಕೋಟಿ ಕೋಟಿ ನಮನಗಳು.