ಶೃಂಗೇರಿ ಭಾಗದಲ್ಲಿ ಶಂಕಿತ ನಕ್ಸಲರು!?
* ಹಲವರನ್ನು ವಶಕ್ಕೆ ಪಡೆದು ವಿಚಾರಣೆ:
* ಕೆರೆಕಟ್ಟೆ, ಕುದುರೆಮುಖ, ತನಿಕೋಡು ಚೆಕ್ ಪೋಸ್ಟ್ ಭಾಗದಲ್ಲಿ ಕೂಂಬಿಂಗ್
NAMMUR EXPRESS NEWS
ಚಿಕ್ಕಮಗಳೂರು: ಶಂಕಿತ ನಕ್ಸಲರು ಇದೀಗ ಶೃಂಗೇರಿ ಭಾಗದಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಅನುಮಾನ ಮೂಡಿದೆ.
ಕಳೆದ ಕೆಲವು ದಿನಗಳ ಹಿಂದೆ ಕಾರ್ಕಳ ಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಈ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಜೊತೆಗೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದೀಗ ಶೃಂಗೇರಿ ತಾಲೂಕು ನೆಮ್ಮಾರ್ ಸಮೀಪದ ಬುಕ್ಕಡಿಬೈಲಿನಲ್ಲಿ ಇಬ್ಬರು ನಕ್ಸಲ್ ಅನುಕಂಪಿತ ವ್ಯಕ್ತಿಗಳನ್ನು ಪೊಲೀಸ್ ಠಾಣೆಗೆ ಕರೆತಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ನೇತೃತ್ವದಲ್ಲಿ ಕೆಲವು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ.
ಅರಣ್ಯ ಒತ್ತುವರಿ ಮತ್ತು ಕಸ್ತೂರಿ ರಂಗನ್ ವರದಿ ಸಂಬಂಧ ಕೊಪ್ಪ ತಾಲೂಕಿನ ಯಡಗುಂದಿ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು. ಈ ಜನರಿಂದ ಎಎನ್ಎಫ್ ಮತ್ತು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ, ಕೆರೆಕಟ್ಟೆ, ಕುದುರೆಮುಖ, ತನಿಕೋಡು ಚೆಕ್ ಪೋಸ್ಟ್ ಭಾಗದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗಿದೆ.