ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.7ರಂದು ಮಹಾರಥೋತ್ಸವ!
* ಪೂಜಾ ಸೇವೆ, ಉತ್ಸವಾದಿಗಳ ವಿವರ ಹೇಗಿದೆ?
* ಸೇವೆಗಳ ವಿವರ ಹೇಗಿದೆ?
NAMMUR EXPRESS NEWS
ಇತಿಹಾಸ ಪ್ರಸಿದ್ಧ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿಗೆ ದಿನಗಣನೆ ಆರಂಭವಾಗಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಚಂಪಾಷಷ್ಠಿ ಹಿನ್ನೆಲೆಯಲ್ಲಿ ನವೆಂಬರ್ 27ರಿಂದ ಡಿ.12ರವರೆಗೆ ವಿವಿಧ ಪೂಜಾ ಸೇವೆಗಳು, ಜಾತ್ರಾ ಉತ್ಸವಾದಿಗಳು ನಡೆಯಲಿದೆ.
ಭಗವತ್ಸಂಕಲ್ಪ ಪ್ರಕಾರ ನಡೆಯುವ ಮಹೋತ್ಸವಗಳಿಗೆ ಭಕ್ತರು ಆಗಮಿಸಿ, ಶ್ರೀ ದೇವರ ಮೂಲ ಮೃತ್ತಿಕಾ ಗಂಧ-ಪ್ರಸಾದವನ್ನು ಸ್ವೀಕರಿಸಿ, ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಆಡಳಿತ ಮಂಡಳಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದೆ.
ನ. 27-2024 ರಿಂದ ನ.30-2024ಗೂ ಹಸಿರು ಕಾಣಿಕೆಗಳನ್ನು ವರೆಗೂ ಕೃತಜ್ಞತಾಪೂರ್ವಕವಾಗಿ ಸ್ವೀಕರಿಸಲಾಗುವುದು ಎಂದು ತಿಳಿಸಿದೆ. ಡಿಸೆಂಬರ್ ಮಹಾರಥೋತ್ಸವ ಸಾಮಾನ್ಯವಾಗಿ 7ರಂದು ದೇವರ ಮಹಾರಥೋತ್ಸವ ನಡೆಯಲಿದೆ. ಚಂಪಾಷಷ್ಠಿಯಂದು ಸುಬ್ರಹ್ಮಣ್ಯ ದೇಗುಲಗಳಲ್ಲೆಲ್ಲ ವಿಶೇಷ ಪೂಜೆಗಳು ನಡೆಯುತ್ತವೆ.
ಅಷ್ಟೇ ಅಲ್ಲ, ಅಶ್ವತ್ಥ ಕಟ್ಟೆಯಲ್ಲಿ ಸರ್ಪಾಕಾರದ ವಿಗ್ರಹವನ್ನಿಟ್ಟು ಸುಬ್ರಹ್ಮಣ್ಯ ಸ್ವಾಮಿಯನ್ನು ಆವಾಹನೆ ಮಾಡಿ, ಹಾಲೆರೆದು ಅಭಿಷೇಕ ಹಾಗೂ ಪಾಯಸದ ನೈವೇದ್ಯ ಅರ್ಪಿಸಲಾಗುತ್ತದೆ. ಜೊತೆಗೆ, ಅಂದು ಉಪವಾಸ ವೃತವನ್ನೂ ಆಚರಿಸಲಾಗುತ್ತದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಲ್ಮೀಖ ಅರ್ಥಾತ್ ಹುತ್ತವು ಇಲ್ಲಿನ ಆರಾಧ್ಯ ದೈವ. ಅಲ್ಲಿಂದ ತೆಗೆದ ಮಣ್ಣು ಅಥವಾ ಮೃತಿಕಾ ಪ್ರಸಾದವೂ ಅತ್ಯಮೂಲ್ಯ ಪ್ರಸಾದವಾಗಿದೆ. ಸರ್ಪದೋಷಕ್ಕೊಳಗಾದವರು ಇಲ್ಲಿ ಸರ್ಪ ಸಂಸ್ಕಾರ ಮಾಡಿ ತಮ್ಮ ಪಾಪ ಕಳೆದು ಕೊಳ್ಳುತ್ತಾರೆ ಎಂಬುದು ಐತಿಹ್ಯ.
ಚಂಪಾಷಷ್ಠಿಯ ದಿನ ಕುಮಾರಧಾರಾ ನದಿಗೆ ವಿಶೇಷ ದೇವರ ಮೀನುಗಳ ಆಗಮಿಸುವುದು ಇಲ್ಲಿನ ಇನ್ನೊಂದು ವಿಶೇಷತೆ. ಇಲ್ಲಿನ ಮಲೆಕುಡಿಯ ಜನಾಂಗದವರು ರಚಿಸುವ ಜಾತ್ರಾ ತೇರು ರಚನೆ ಸೇರಿದಂತೆ ಪ್ರತಿಯೊಂದಕ್ಕೂ ಕೂಡ ಅದರದ್ದೇ ಆದ ವಿಶೇಷತೆಗಳಿವೆ.
ಸೇವೆಗಳ ವಿವರ ಹೇಗಿದೆ?
ಮಹಾರಥೋತ್ಸವ, ಚಿಕ್ಕ ರಥೋತ್ಸವ, ಚಂದ್ರಮಂಡಲ ಉತ್ಸವ, ಹೂವಿನ ತೇರಿನ ಉತ್ಸವ, ಬಂಡಿ ಉತ್ಸವ, ಮಹಾಭಿಷೇಕ, ದೀಪಾರಾಧನೆ ಪಾಲಕಿ ಉತ್ಸವ, ಮಹಾಪೂಜೆ ಪಾಲಕಿ ಉತ್ಸವ, ಸಪರಿವಾರ ಸೇವಾ, ನಾಗಪ್ರತಿಷ್ಠೆ, ಆಶ್ಲೇಷ ಬಲಿ, ಮಹಾಪೂಜೆ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಕ್ಷೀರಾಭಿಷೇಕ, ಶೇಷ ಸೇವೆ, ಹರಿವಾಣ ನೈವೇದ್ಯ ಕಾರ್ತಿಕ ಪೂಜೆ ಸೇವೆಗಳು ನಡೆಯಲಿವೆ.