ಕಾಫಿನಾಡಲ್ಲಿ ಬಿಜೆಪಿಯಿಂದ ಆಹೋರಾತ್ರಿ ಧರಣಿ
* ವಕ್ಫ್ ಬೋರ್ಡ್, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
* ನಮ್ಮ ಭೂಮಿ – ನಮ್ಮ ಹಕ್ಕು ಹೆಸರಿನಲ್ಲಿ ಧರಣಿ
* ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರು,ಸ್ವಾಮೀಜಿಗಳು ಭಾಗಿ
NAMMUR EXPRESS NEWS
ಚಿಕ್ಕಮಗಳೂರು: ರಾಜ್ಯಾದ್ಯಂತ ಸದ್ದು ಮಾಡಿ ಭಾರೀ ವಿರೋಧಕ್ಕೆ ಕಾರಣವಾಗಿರುವ ರೈತರ ಜಮೀನಿನ ದಾಖಲೆಗಳಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದಿಸಿ ರೈತರ ಜಮೀನನನ್ನು ವಕ್ಫ್ ಬೋರ್ಡ್ ಜಾಗ ಎಂದು ನಮೂದಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯಿಂದ ಆಹೋರಾತ್ರಿ ಧರಣಿ ಪ್ರತಿಭಟನೆಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಆಜಾದ್ ಪಾರ್ಕ್ನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಅಹೋರಾತ್ರಿ ಪ್ರತಿಭಟನೆ ನಡೆಯಿತು.
ಗುರುವಾರ ಬೆಳಿಗ್ಗೆ 10 ಗಂಟೆಗೆ ಆರಂಭವಾದ ನಮ್ಮ ಭೂಮಿ – ನಮ್ಮ ಹಕ್ಕು ಎಂಬ ಆಹೋರಾತ್ರಿ ಧರಣಿ ಪ್ರತಿಭಟನೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರಾದ ಸಿ.ಟಿ ರವಿ,ಡಿ.ಎನ್ ಜೀವರಾಜ್,ದೀಪಕ್ ದೊಡ್ಡಯ್ಯ, ವಿಧಾನ ಪರಿಷತ್ ಸದಸ್ಯ ಪ್ರಾಣೇಶ್,ಸುರೇಶ್,ಬೆಳ್ಳಿ ಪ್ರಕಾಶ್,ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸೇರಿದಂತೆ ಬಿಜೆಪಿಯ ಪ್ರಮುಖರು,ಕಾರ್ಯಕರ್ತರು,ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು, ಜಯ ಬಸವಾನಂದ ಹಾಗೂ ಚಂದ್ರಶೇಖರ ಶ್ರೀಗಳು ಭಾಗಿಯಾಗಿ ಹಸಿರು ಶಾಲು ಧರಿಸಿ ರೈತರ ಪರ ಧ್ವನಿ ಎತ್ತಿ ವಕ್ಫ್ ಬೋರ್ಡ್ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಿದರು.