- ಸಂತೋಷ್ ಆತ್ಮಹತ್ಯೆಗೆ ಈಶ್ವರಪ್ಪ ಕಾರಣ: ಗುತ್ತಿಗೆ ದಾರರ ಸಂಘ: 1 ತಿಂಗಳು ಕೆಲಸ ಮಾಡಲ್ಲ..!
- ರಾಜ್ಯದ ಅನೇಕ ಬಿಜೆಪಿ ಸಚಿವರು, ಶಾಸಕರು ಗುತ್ತಿಗೆ ಕಾಂಟ್ರಾಕ್ಟ್ ಪಡೆದು ಗೋಲ್ ಮಾಲ್
- ಭ್ರಷ್ಟಾಚಾರ ಬಯಲು ಮಾಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ
NAMMUR EXPRESS NEWS
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಎಲ್ಲಾ ಕಡೆ ಕಮಿಷನ್ ವಂಚನೆ ಆಗುತ್ತಿದೆ. ಸಿಎಂ ಕಚೇರಿ ಕೂಡ ಭ್ರಷ್ಟಾಚಾರದ ಕೇಂದ್ರವಾಗಿದೆ. ಬಿಜೆಪಿ ಶಾಸಕರು, ಸಚಿವರು ಕೂಡ ಭ್ರಷ್ಟಾಚಾರ ಮಾಡುತ್ತಿದ್ದೂ ಅವರ ಕುಟುಂಬದವರೇ ಟೆಂಡರ್ ಹಿಡಿಯುತ್ತಿದ್ದಾರೆ. 5% ಕೊಡದಿದ್ದರೆ ಟೆಂಡರ್ ಕೊಡಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದಾರೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಗುತ್ತಿಗೆದಾರರ ಸಂಘದಿಂದ ಮಹತ್ವದ ಸಭೆ ನಡೆಸಿ ಮಾತನಾಡಿದ ಅವರು, 15 ದಿನಗಳ ಒಳಗೆ ದಾಖಲೆ ಬಿಡುಗಡೆ ಮಾಡಲಾಗುವುದು. 1 ತಿಂಗಳು ಎಲ್ಲಾ ಕಡೆ ಕೆಲಸ ಬಹಿಷ್ಕಾರ ಮಾಡಲಾಗುವುದು ಎಂದು ಎಚ್ಚರಿಸಿದರು.
ಶಿವಮೊಗ್ಗಕ್ಕೆ ಆಗಮಿಸಿದ ಈಶ್ವರಪ್ಪ!:
ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕಂಟಕವಾಗಿ ಪರಿಣಮಿಸುವ ಎಲ್ಲ ಲಕ್ಷಣಗಳೂ ದಟ್ಟವಾಗುತ್ತಿವೆ. ಮೈಸೂರು ಪ್ರವಾಸದಲ್ಲಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಅವರು ದಿಢೀರನೇ ಮೈಸೂರಿನಿಂದ ಶಿವವೊಗ್ಗಕ್ಕೆ ತೆರಳಿದ್ದು ಕುತೂಹಲ ಮೂಡಿಸಿದೆ. ಅಲ್ಲದೇ ಮಧ್ಯಾಹ್ನ 1 ಗಂಟೆಗೆ ಸಚಿವ ಈಶ್ವರಪ್ಪ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಏನು ಹೇಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ರಾಜ್ಯದಲ್ಲಿ ಹೆಚ್ಚಿದ ಹೋರಾಟದ ಕಿಚ್ಚು
ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿದಿದ್ದು ಗುರುವಾರ ಸಿಎಂ ಮನೆ ಘೆರಾವ್ ಹಾಕಲು ಪ್ಲಾನ್ ಸಿದ್ಧತೆ ನಡೆಸಲಾಗಿದೆ. ಅಮಿತ್ ಶಾ ಮನೆಗೆ ದೆಹಲಿಯಲ್ಲಿ ಮುತ್ತಿಗೆ ಹಾಕಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಅವರ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಗಾಂಧಿ ಭವನದ ರಸ್ತೆಯಲ್ಲಿ ರುವ ಈಶ್ವರಪ್ಪ ಸರ್ಕಾರಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಭದ್ರತೆ ಒದಗಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದ ಸಚಿವರಾದ ಕೆ.ಎಸ್.ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಮಂಗಳವಾರ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.