ಸಿಎಂ ಪರಿಹಾರ ನಿಧಿಗೆ 50 ಲಕ್ಷ ಕೊಟ್ಟ ಶಿವಮೊಗ್ಗ ಡಿಸಿಸಿ ಬ್ಯಾಂಕ್!
– ಬ್ಯಾಂಕ್ ಅಧ್ಯಕ್ಷರಾದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಆರ್. ಎಂ. ಮಂಜುನಾಥ ಗೌಡ, ಬೇಳೂರು ಗೋಪಾಲಕೃಷ್ಣ ಚೆಕ್ ವಿತರಣೆ
– ರಾಜ್ಯದ ಅಭಿವೃದ್ಧಿಗೆ ಡಿಸಿಸಿ ಬ್ಯಾಂಕ್ ಕೊಡುಗೆ
NAMMUR EXPRESS NEWS
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ “ಮುಖ್ಯಮಂತ್ರಿಗಳ ಪರಿಹಾರ ನಿಧಿ” ಗೆ ರೂ. 50.00 ಲಕ್ಷಗಳ ಚೆಕ್ಕನ್ನು ದಿನಾಂಕ 28.11.2024 ರಂದು ಬ್ಯಾಂಕಿನ ಅಧ್ಯಕ್ಷರಾದ ಡಾ.ಆರ್.ಎಂ. ಮಂಜುನಾಥಗೌಡ ಹಾಗೂ ನಿರ್ದೇಶಕರುಮತ್ತು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಇವರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಇವರಿಗೆ ನೀಡಿದರು. ಈ ವೇಳೆ ಡಿಸಿಸಿ ಬ್ಯಾಂಕ್ ನಿರ್ದೇಶಕರು, ಅಧಿಕಾರಿಗಳು ಹಾಜರಿದ್ದರು.