ಟಾಪ್ 3 ನ್ಯೂಸ್ ಕರಾವಳಿ
– ನಕ್ಸಲ್ ವಿಕ್ರಮ್ಗೌಡ ಎನ್ಕೌಂಟರ್ ನಕಲಿ ಅಲ್ಲ!
– ಉಡುಪಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
– ಮೂಲ್ಕಿ: ಬಪ್ಪನಾಡು ಸೇತುವೆ ಬಳಿ ಹೊತ್ತಿ ಉರಿದ ಕಂಟೇನರ್!
– ಬಂಟ್ವಾಳ: ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ಮಾಪಕನಿಂದ ವಂಚನೆ: ದೂರು
NAMMUR EXPRESS NEWS
ಉಡುಪಿ: ನಕ್ಸಲ್ ವಿಕ್ರಮ್ಗೌಡ ಎನ್ಕೌಂಟರ್ ನಕಲಿ ಅಲ್ಲ. ಎನ್ಕೌಂಟರ್ನ ನ್ಯಾಯಸಮ್ಮತತೆಯನ್ನು ಅನುಮಾನಿಸಬೇಡಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಉಡುಪಿ ಜಿಲ್ಲಾ ಗೃಹ ಕಚೇರಿಯಲ್ಲಿ ಶನಿವಾರ ಮಾತನಾಡಿದ ಸಚಿವರು, ಘಟನೆಯ ಕುರಿತು ನ್ಯಾಯಾಂಗ ತನಿಖೆ ಅಗತ್ಯವಿಲ್ಲ. ಆದರೆ, ಅಗತ್ಯ ಬಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು. ವಿಕ್ರಮ್ ಗೌಡ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವುದನ್ನು ಸಚಿವರು ಗಮನಿಸಿದರು. ನಕ್ಸಲ್ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಸರ್ಕಾರದ ನಿರ್ಧಾರ. ಕೂಂಬಿಂಗ್ ಕಾರ್ಯಾಚರಣೆಯ ಸಂದರ್ಭದಲ್ಲಿ ಎನ್ಕೌಂಟರ್ ಸಂಭವಿಸಿದೆ ಮತ್ತು ವಿಕ್ರಮ್ ಗೌಡ ಶಸ್ತ್ರಸಜ್ಜಿತನಾಗಿದ್ದನು. ಅವರು ಪೊಲೀಸರ ಮೇಲೆ ಗುಂಡು ಹಾರಿಸಿದರು ಮತ್ತು ಅಧಿಕಾರಿಗಳ ಜೀವವನ್ನು ರಕ್ಷಿಸಲು ಪ್ರತಿದಾಳಿ ಅಗತ್ಯ ಎಂದು ಅವರು ವಿವರಿಸಿದರು.
ನಕ್ಸಲಿಸಂ ನಿರ್ಮೂಲನೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬದ್ಧವಾಗಿವೆ. ಚರ್ಚೆಗಳು ಮತ್ತು ಟೀಕೆಗಳು ಯಾವಾಗಲೂ ಇರುತ್ತವೆ, ಆದರೆ ಸರ್ಕಾರವು ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿದೆ. ಅನುಮಾನಗಳಿದ್ದಲ್ಲಿ ಹೆಚ್ಚಿನ ಸ್ಪಷ್ಟನೆ ನೀಡಲು ಸಿದ್ಧ ಎಂದು ಸಚಿವರು ಭರವಸೆ ನೀಡಿದರು.
ಬಪ್ಪನಾಡು ಸೇತುವೆ ಬಳಿ ಹೊತ್ತಿ ಉರಿದ ಕಂಟೇನರ್!
ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ಕಂಟೇನರ್ ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್ ಮೇಲ್ಗಡೆ ಹೊತ್ತಿ ಉರಿದಿದ್ದು ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾಯಿತು ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೆಟ್ ಪ್ಲೆಕ್ಸ್ ಕಂಪನಿಯಿಂದ ಮಂಗಳೂರು ಬಂದರ್ ಕಡೆಗೆ ಪ್ಲಾಸ್ಟಿಕ್ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೇನರ್ ಬಪ್ಪನಾಡು ಸೇತುವೆ ತಲುಪುತ್ತಿದ್ದಂತೆ ಬ್ರೇಕ್ ಲೈನರ್ ಜಾಮ್ ಆಗಿ ಟಯರ್ ಮೇಲ್ಗಡೆ ಹೊತ್ತಿ ಉರಿದಿದೆ. ಬೆಂಕಿ ಧಗ ಧಗನೇ ಹೊತ್ತಿ ಉರಿಯುತ್ತಿದ್ದಂತೆ ಕಂಗಾಲಾದ ಕಂಟೇನರ್ ಚಾಲಕ ಹಿಮಾಚಲ ಪ್ರದೇಶ ನಿವಾಸಿ ರಂಜಿತ್ ಕೆಳಗೆ ಹಾರಿ ಅಪಾಯದಿಂದ ಪಾರಾಗಿದ್ದಾನೆ.ಕೂಡಲೇ ಮುಲ್ಕಿನ ಪಂ ಸದಸ್ಯ ಬಾಲಚಂದ್ರ ಕಾಮತ್, ಮುಲ್ಕಿ ಪೊಲೀಸ್ ಠಾಣೆಯ ಎಸ್ಐ ಅನಿತ ನೇತೃತ್ವದಲ್ಲಿ ಮುಲ್ಕಿ ಹಾಗೂ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು, ಹೆಜ್ಜಾಡಿ ಟೋಲ್ ಸಿಬ್ಬಂದಿ ಹಾಗೂ ಸ್ಥಳೀಯರು ಪೆಟ್ರೋಲ್ ಬಂಕ್ ಬಳಿಯಿಂದ ಬೆಂಕಿ ನಂದಿಸುವ ಸಾಧನವನ್ನು ತಂದು ಕೂಡಲೇ ಬೆಂಕಿ ನಂದಿಸಿದ್ದಾರೆ. ಬಳಿಕ ಹಳೆಯಂಗಡಿಯ ಪೂಜಾ ರೇಂಜರ್ಸ್ ವತಿಯಿಂದ ನೀರನ್ನು ತಂದು ಪೂರ್ತಿ ಬೆಂಕಿ ನಂದಿಸಲಾಯಿತು. ಬೆಂಕಿ ಹೊತ್ತಿ ಉರಿದರೆ ಕಂಟೇನರ್ ನ ಪೆಟ್ರೋಲ್ ಟ್ಯಾಂಕ್ ಸ್ಫೋಟವಾಗುವ ಸಾಧ್ಯತೆ ಇತ್ತು ಅವಘಡದ ಸಂದರ್ಭ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಪೊಲೀಸರು ತೆರವುಗೊಳಿಸಿದ್ದಾರೆ.
ಬಂಟ್ವಾಳ: ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ಮಾಪಕನಿಂದ ವಂಚನೆ: ದೂರು
ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ಮಾಣ ಮಾಡಿರುವ ನಿರ್ಮಾಪಕನೊಬ್ಬನ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ತುಳುವಿನ ‘ಜೀಟಿಗೆ’ ಹೆಸರಿನ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ಮಾಣ ಮಾಡಿದ್ದ ಅರುಣ್ ರೈ ವಿರುದ್ಧ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕನ್ನಡದ ವೀರಕಂಬಳ ಸಿನಿಮಾವನ್ನು ಸಹ ಅರುಣ್ ನಿರ್ಮಾಣ ಮಾಡುತ್ತಿದ್ದರು. ದೂರು ದಾಖಲಾದ ಬೆನ್ನಲ್ಲೆ ನಿರ್ಮಾಪಕ ಪರಾರಿ ಆಗಿದ್ದಾರೆ.ಬಂಟ್ವಾಳ ಮೂಲದ ಉದ್ಯಮಿಯೊಬ್ಬರನ್ನು ಬೆಂಗಳೂರಿನ ತಾಜ್ ಹೋಟೆಲ್ ನಲ್ಲಿ ಪರಿಚಯ ಮಾಡಿಕೊಂಡಿದ್ದ ನಿರ್ಮಾಪಕ ಅರುಣ್ ರೈ, ತಾನು ‘ವೀರಕಂಬಳ’ ಸಿನಿಮಾ ನಿರ್ಮಾಣ ಮಾಡುತ್ತಿದ್ದು ಅದರ ಲಾಭಾಂಶದಲ್ಲಿ 60 ಲಕ್ಷ ರೂಪಾಯಿ ಕೊಡುವುದಾಗಿ ಹೇಳಿ ಹಣ ಪಡೆದುಕೊಂಡಿದ್ದಾನೆ. ಕೋವಿಡ್ ವೇಳೆ ಬಂಟ್ವಾಳ ಮೂಲದ ಉದ್ಯಮಿಗೆ ಗೇರು ಬೀಜಾ ಸಂಸ್ಕರಣಾ ಘಟಕದಲ್ಲಿ 25 ಕೋಟಿ ನಷ್ಟವಾಗಿತ್ತು, ಅದನ್ನೇ ಬಂಡವಾಳವಾಗಿ ಬಳಸಿದ ಅರುಣ್, ತಾನು ಹಣವನ್ನು ಮತ್ತೆ ಗಳಿಸಿಕೊಡುವುದಾಗಿ ಹೇಳಿ ಆಸೆ ಹುಟ್ಟಿಸಿದ್ದಾನೆ.
‘ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಿ ನಾನು ನಿಮಗೆ ಲಾಭ ಮಾಡಿಕೊಡುತ್ತೇನೆ ಎಂದಿದ್ದ ಅರುಣ್, ತಾನು ದೆಹಲಿಯಲ್ಲಿ 400 ಕೋಟಿ ಹೂಡಿಕೆ ಮಾಡಿರುವುದಾಗಿ ಸುಳ್ಳು ಹೇಳಿದ್ದಾನೆ. ತಮಿಳುನಾಡಿನ ದಿಂಡಿಗಲ್ ಕಾಳಿ ಸ್ವಾಮಿಯಿಂದ 50 ಕೋಟಿ ಹಣ ಬರಲಿಕ್ಕೆ ಇದೆ, ಪಳನಿ ದೇವಾಲಯದ ಟ್ರಸ್ಟ್ ನಿಂದಲೂ ಸಾಲ ಕೊಡಿಸ್ತೇನೆ, ಜಾರ್ಖಂಡ್ ಸರ್ಕಾರದಿಂದ 50 ಕೋಟಿ ಕೆಲಸದ ಬಿಲ್ ಬಾಕಿ ಇದೆ, ಮಂಗಳೂರಿನ ಗೋಡೌನ್ ನಲ್ಲಿ 40 ಕೋಟಿ 5 ಮೌಲ್ಯದ ಕ್ಯಾಶ್ ನಟ್ಸ್ (ಗೋಡಂಬಿ )ಇದೆ ಅದನ ಎಂದೆಲ್ಲ ಸುಳ್ಳು ಹೇಳಿದ್ದ ನಿರ್ಮಾಪಕ ಎಂದು ದೂರು ದಾಖಲಾಗಿದೆ.