ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ‘ಶೋಕಾಸ್’ ನೋಟಿಸ್..!!
– ಪದೇ ಪದೇ ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್
– ನೋಟೀಸ್ ಬೆನ್ನಲ್ಲೇ ದೆಹಲಿಗೆ ತೆರಳಿದ ಯತ್ನಾಳ್
NAMMUR EXPRESS NEWS
ಬೆಂಗಳೂರು: ಬಿಜೆಪಿಯಲ್ಲಿನ ಒಳಜಗಳ,ಬಣಬಡಿದಾಟ ತಾರಕಕ್ಕೇರುತ್ತಿದ್ದಂತೆ ಕೇಂದ್ರ ಹೈಕಮಾಂಡ್ ಎಂಟ್ರೀ ಕೊಟ್ಟಿದೆ. ಪದೇ ಪದೇ ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸುತ್ತಿದ್ದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟೀಸ್ ನೀಡಲಾಗಿದೆ. ಬಿಜೆಪಿ ಹೈಕಮಾಂಡ್ ಬಿ ವೈ ವಿಜಯೇಂದ್ರ ಅವರನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದಾಗಿನಿಂದಲೂ ಸಹ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಬಳಿಕ ಯತ್ನಾಳ್ ಹಾಗೂ ಬಿ ವೈ ವಿಜಯೇಂದ್ರ ಬಣಗಳ ನಡುವಿನ ಬಣ ಬಡಿದಾಟ ಮತ್ತಷ್ಟು ತೀವ್ರವಾಗಿತ್ತು. ಇದೀಗ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ್ದ ಹಿನ್ನೆಲೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಯತ್ನಾಳ್ ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಶೋಕಾಶ್ ನೋಟಿಸ್ ಜಾರಿ ಮಾಡಿದೆ. ಶಾಸಕ ಯತ್ನಾಳ್ರ ಈ ನಡೆಯ ವಿರುದ್ಧ ಬಿಜೆಪಿಯ ಹಲವು ಶಾಸಕರು, ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಹಿರಿಯ ನಾಯಕ ಡಿ.ವಿ ಸದಾನಂದಗೌಡ ಕೇಂದ್ರ ಹೈಕಮಾಂಡ್ ಮಧ್ಯಪ್ರವೇಶಿಸುವಂತೆ ಆಗ್ರಹಿಸಿದ್ದರು. ನೋಟೀಸ್ ನೀಡಿದ ಬೆನ್ನಲ್ಲೇ ಯತ್ನಾಳ್ ದೆಹಲಿಗೆ ತೆರಳಿದ್ದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.