ವರ್ಧಮಾನ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಸಾಧನೆ
– ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
– ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆಗಳು
NAMMUR EXPRESS NEWS
ಕಾರ್ಕಳ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ದಿನಾಂಕ 01.12.2024ರಂದು ತುಮಕೂರಿನಲ್ಲಿ ಆಯೋಜಿಸಲಾದ ಗೀತಾ ಗಾಯನ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕಾರ್ಕಳದ ವರ್ಧಮಾನ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆ ಮೆರೆದಿದ್ದಾರೆ. ಈ ಸ್ಪರ್ಧೆಯಲ್ಲಿ ಆದಿತ್ ವರ್ಮ ಜೈನ್, ಮೇದಾಂಶ್ ಪಡುಮಲೆ, ಆರ್ಯನ್ ಜೈನ್, ಪ್ರಜ್ಞಾನ್ ಕೋಟ್ಯಾನ್, ಅಮೋಘ್ ಬಾಳಿಗ, ಹಾಗೂ ದೃವ್ ನಾಯಕ್ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಸಂಚಾಲಕರಾದ ಶಶಿಕಲಾ ಕೆ. ಹೆಗ್ಡೆ, ಕುಮಾರಯ್ಯ ಹೆಗ್ಡೆ, ಆಡಳಿತಾಧಿಕಾರ ಕರ್ತವ್ಯ ಜೈನ್, ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.