- ಅಡುಗೆ ಸಿಲಿಂಡರ್ ದರ ₹ 200 ಕಡಿತ
- ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ
- ರಾಜ್ಯ ಸರ್ಕಾರ ಕೂಡ ಕಡಿಮೆ ಮಾಡುತ್ತಾ?
NAMMUR EXPRESS NEWS
ನವ ದೆಹಲಿ: ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀಟರ್ಗೆ ರೂ 8 ಮತ್ತು ಡೀಸೆಲ್ನ ಮೇಲೆ 6ರಷ್ಟು ಕಡಿಮೆ ಮಾಡಿದೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ದರ ₹9.5 ಡೀಸೆಲ್ ದರ ₹7 ಇಳಿಕೆಯಾಗಲಿದೆ. ಇನ್ನು ಅಡುಗೆ ಸಿಲಿಂಡರ್ ದರ ₹200 ಕಡಿತ ಮಾಡಲಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಕೇಂದ್ರದ ನಿರ್ಧಾರದ ಬೆನ್ನಲ್ಲೇ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಕೂಡ ಶುಭ ಸುದ್ದಿ ನೀಡುವ ಸಾಧ್ಯತೆಗಳಿವೆ.
ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್) ವಾರ್ಷಿಕ ಸಭೆಯಲ್ಲಿ ಭಾಗವಹಿಸಲು ದಾವೋಸ್ಗೆ ಭೇಟಿ ನೀಡುವ ಮುನ್ನ ಮಾತನಾಡಿದ ಅವರು, ನವೆಂಬರ್ 2021ರಲ್ಲಿ, ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 35 ರಿಂದ 25.9ಕ್ಕೆ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 24 ರಿಂದ 14.34 ಕ್ಕೆ ಇಳಿಸಿತ್ತು. ಇದರ ಪರಿಣಾಮವಾಗಿ ಪೆಟ್ರೋಲ್ ಬೆಲೆ ಲೀಟರ್ಗೆ 13.30 ರೂ ಮತ್ತು ಡೀಸೆಲ್ ಪ್ರತಿ ಲೀಟರ್ಗೆ 19.47 ರೂ ಇಳಿಕೆಯಾಗಿದೆ.