ಕರಾವಳಿ ಟಾಪ್ ನ್ಯೂಸ್
– ಸುಳ್ಯ : ಅಯ್ಯಪ್ಪ ಮಾಲಾಧಾರಿ ಮೇಲೆ ಕಾಡಾನೆ ದಾಳಿ :ಗಂಭೀರ ಗಾಯ
– ಉಡುಪಿ : ಗೂಡ್ಸ್ ವಾಹನಕ್ಕೆ ಬೆಂಕಿ : ತಪ್ಪಿದ ಭಾರೀ ದುರಂತ
– ಉಡುಪಿ: ವಿಷದ ಹಾವು ಕಡಿತ : ಕೃಷಿಕ ಸಾವು
NAMMUR EXPRESS NEWS
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪ ಕನ್ನಡ ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಸುಳ್ಯದ ಕಲ್ಮಕಾರು ಎಂಬಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ಚರಿತ್ ಎಂದು ಗುರುತಿಸಲಾಗಿದೆ. ರಸ್ತೆ ಬದಿಯ ಹೊಳೆಯಲ್ಲಿ ಬಟ್ಟೆ ತೊಳೆಯುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ. ಕಾಡಾನೆ ದಾಳಿಗೆ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲಾಧಾರಿ ಚರಿತ್ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
* ಉಡುಪಿ : ಗೂಡ್ಸ್ ವಾಹನಕ್ಕೆ ಬೆಂಕಿ : ತಪ್ಪಿದ ಭಾರೀ ದುರಂತ
ಉಡುಪಿ : ತೆಂಗಿನ ಕಾಯಿ ನಾರು ಸಾಗಿಸುತ್ತಿದ್ದ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ವರದಿಯಾಗಿದೆ.
ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ತಕ್ಷಣ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಕದಲ್ಲೆ ವಸತಿ, ಹೊಟೇಲ್, ಕೆಫೆಯಿದ್ದು ಬೆಂಕಿ ವ್ಯಾಪಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸೂಕ್ತ ಸಮಯದಲ್ಲಿ ಅಗ್ನಿ ಶಾಮಕ ದಳದ ವಾಹನ ಬಂದು ನಂದಿಸಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
* ಉಡುಪಿ: ವಿಷದ ಹಾವು ಕಡಿತ : ಕೃಷಿಕ ಸಾವು
ಉಡುಪಿ: ನಗರದ ಕೆಮ್ಮಣ್ಣು ಸಮೀಪ ವಿಷದ ಹಾವು ಕಡಿತಕ್ಕೆ ಒಳಗಾಗಿದ್ದ ಕೃಷಿಕ ರೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.
ಸಾವನ್ನಪ್ಪಿದ ದುರ್ದೈವಿ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ನಿವಾಸಿ ದಿ.ಬೂಧ ಪೂಜಾರಿಯವರ ಮಗ ಕೃಷಿಕ ಸುಂದರ ಪೂಜಾರಿ ಎಂದು ತಿಳಿದು ಬಂದಿದೆ.
ಸುಂದರ ಪೂಜಾರಿ ತೋಟದಲ್ಲಿ ಕೃಷಿ ಚಟುವಟಿಕೆ ನಿರತರಾಗಿದ್ದಾಗ ಇವರಿಗೆ ವಿಷದ ಹಾವು ಕಚ್ಚಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಅಸ್ವಸ್ಥಗೊಂಡ ಇವರು, ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ತಿಳಿಯಲಾಗಿದೆ. ಕೃಷಿ ಕಾರ್ಯಗಳಲ್ಲಿ ಮತ್ತು ಕೃಷಿ ಸಂಘಟನೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುತ್ತಿದ್ದ ಇವರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.