ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳಿದ್ದ ವಾಹನ ಪಲ್ಟಿ..!
* ಐವರು ಮಕ್ಕಳಿಗೆ ಗಾಯ,ಆಸ್ಪತ್ರೆಗೆ ದಾಖಲು
* ಟೈರ್ ಸ್ಟೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ವಾಹನ
NAMMUR EXPRESS NEWS
ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳಿದ್ದ ವಾಹನವೊಂದು ಪಲ್ಟಿಯಾಗಿ ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್ ಬಳಿ ಈ ಘಟನೆ ನಡೆದಿದ್ದು ಮೈಸೂರಿನ ಖಾಸಗಿ ಶಾಲೆಯೊಂದರ ವಿದ್ಯಾರ್ಥಿಗಳು ಚಿಕ್ಕಮಗಳೂರಿಗೆ ಪ್ರವಾಸಕ್ಕಾಗಿ ತೆರಳುತ್ತಿದ್ದ ಶಾಲಾ ವಾಹನ ಕೈಮರ ಚೆಕ್ ಪೋಸ್ಟ್ ಬಳಿ ಟೈಯರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ, ಪರಿಣಾಮ 12 ಮಕ್ಕಳಲ್ಲಿ 5 ಮಕ್ಕಳು ಗಾಯಗೊಂಡಿದ್ದಾರೆ. ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.