ಕರಾವಳಿ ಟಾಪ್ ನ್ಯೂಸ್
– ಕೋಣೆಯಲ್ಲಿ ಕೂಡಿ ಹಾಕಿ ಯುವತಿ ರೇಪ್: ಆರೋಪಿ ಅರೆಸ್ಟ್!
– ಮಣಿಪಾಲ: ಬಾವಿಗೆ ಕೊಡಪಾನ ತೆಗೆಯಲು ಇಳಿದ ವ್ಯಕ್ತಿ ಮೃತ್ಯು
– ಹೆಬ್ರಿ: ಮಹಿಳೆಯೊಬ್ಬರಿಗೆ ಜೀವ ಬೆದರಿಕೆ : ಪ್ರಕರಣ ದಾಖಲು
– ಬಂಟ್ವಾಳ: ಮನೆಯ ಅಂಗಳದಲ್ಲಿ ಗಲಾಟೆ: ಬಂಧನ
NAMMUR EXPRESS NEWS
ಬಂಟ್ವಾಳ: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೋರ್ವ ಅತ್ಯಾಚಾರಗೈದ ಘಟನೆ ತಡವಾಗಿ ವರದಿಯಾಗಿದೆ. ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ನಾವೂರ ನಿವಾಸಿ ಜಯಂತ ಎಂದು ಗುರುತಿಸಲಾಗಿದೆ. ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ನೊಂದ ಯುವತಿಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಳು. ಗ್ರಾಮಾಂತರ ಎಸ್.ಐ.ಹರೀಶ್ ಅವರ ಪೊಲೀಸ್ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
* ಮಣಿಪಾಲ: ಬಾವಿಗೆ ಕೊಡಪಾನ ತೆಗೆಯಲು ಇಳಿದ ವ್ಯಕ್ತಿ ಮುಳುಗಿ ಮೃತ್ಯು
ಮಣಿಪಾಲ: ಸರಳೆಬೆಟ್ಟು ವಿಷ್ಣುಮೂರ್ತಿ ದೇವಸ್ಥಾನದ ಬಳಿ ಮನೆಯೊಂದರ ಬಾವಿಗೆ ಬಿದ್ದ ಕೊಡಪಾನ ತೆಗೆಯಲು ಬಾವಿಗೆ ಇಳಿದಾಗ ಬಾವಿಗೆ ಆಯ ತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿ ಶಿವನಾಯ್ಕ್ (50) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದ ಗ್ರೀನ್ ಪಾರ್ಕ್ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಲೋಕು ಪೂಜಾರಿಯವರ ಮನೆಯ ಆವರಣದಲ್ಲಿರುವ ಬಾವಿಗೆ ಅವರ ಕೊಡಪಾನ ಬಿದ್ದದ್ದನ್ನು ತೆಗೆಯಲು ಶಿವನಾಯ್ಕ್ ಅವರು ಬಾವಿಗೆ ಇಳಿದಾಗ ಈ ದುರ್ಘಟನೆ ಸಂಭವಿಸಿದೆ. ತಕ್ಷಣ ಉಡುಪಿ ಅಗ್ನಿಶಾಮಕ ದಳದವರು ಬಂದು ಶವವನ್ನು ಬಾವಿಯಿಂದ ಮೇಲೆತ್ತಿದ್ದಾರೆ. ಮೃತರು ಪತ್ನಿ ಓರ್ವ ಪುತ್ರ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
* ಹೆಬ್ರಿ: ಮಹಿಳೆಯೊಬ್ಬರಿಗೆ ಜೀವಬೆದರಿಕೆ : ಪ್ರಕರಣ ದಾಖಲು
ಹೆಬ್ರಿ: ಹೆಬ್ರಿ ಸಮೀಪದ ಅಜೆಕಾರು ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆಯೊಡ್ಡಿದ ಘಟನೆ ಮರ್ಣೆ ಗ್ರಾಮದ ಅಜೆಕಾರು ದೆಪ್ಪುತ್ತೆ ಎನ್ನುವಲ್ಲಿ ನಡೆದಿದೆ. ಶಿರ್ಲಾಲಿನ ಸುನಂದ ಅವರು ಡಿ. 19ರಂದು ದೆಪ್ಪುತ್ತೆಯ ರೇಷ್ಮಾ ಟೆಲಿಸ್ ಕ್ರಿಸ್ಪಾಲ್ ಅವರ ತೋಟದಲ್ಲಿ ಜ್ಯೋತಿ, ಸಂಕ್ರಾಯ, ವಿಜಯ ಅವರ ಜತೆ ಕೆಲಸ ಮಾಡುತ್ತಿದ್ದಾಗ ಸ್ಥಳಕ್ಕೆ ಬಂದ ಪ್ರದೀಪ್ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆಗೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿದ್ದಾರೆಂದು ಸುನಂದಾ ದೂರು ನೀಡಿದ್ದು, ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
* ಬಂಟ್ವಾಳ: ಮನೆಯ ಅಂಗಳದಲ್ಲಿ ಗಲಾಟೆ: ದೂರು, ಪ್ರತಿದೂರು, ಅರೆಸ್ಟ್
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡಿನ ಕೈಕಂಬ ಪರ್ಲಿಯಾದಲ್ಲಿ ಬಾಡಿಗೆ ಕೊಡುವ ವಿಚಾರದಲ್ಲಿ ಎರಡು ತಂಡಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಗಲಾಟೆಗೆ ಸಂಬಂಧಿಸಿ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಗಳನ್ನು ಪರ್ಲಿಯಾ ಮದ್ದ ಮನೆ ನಿವಾಸಿ ಶಾಹುಲ್ ಹಮೀದ್ ಹಾಗೂ ತಾರಿಪಡ್ಪು ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಇವರಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮನೆಯ ಅಂಗಳದಲ್ಲಿ ಎರಡು ತಂಡಗಳ ನಡುವೆ ಗಲಾಟೆಯ ವಿಡಿಯೋ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವೈಯಕ್ತಿಕ ವಿಚಾರದಲ್ಲಿ ಆರಂಭವಾದ ಗಲಾಟೆ ರಾಜಕೀಯ ಬಣ್ಣ ಪಡೆದುಕೊಂಡಿದ್ದು, ಎಸ್.ಡಿ.ಪಿ.ಐ.ಮತ್ತು ಕಾಂಗ್ರೆಸ್ ಪಕ್ಷದ ಅಂಗಳದಲ್ಲಿ ಮಾತಿನ ಫೈರಿಂಗ್ ಆರಂಭವಾಗಿದ್ದು, ಗಲಾಟೆ ನಡೆದಿದೆ.