ಕರಾವಳಿ ಟಾಪ್ ನ್ಯೂಸ್
– ಕಾಸರಗೋಡು: ಗಾಂಜಾ, ಗಾಂಜಾ, ಗಾಂಜಾ!!
– 30 ಕಿಲೋ ಗಾಂಜಾ ಪ್ಲಾಸ್ಟಿಕ್ ಕವರ್ ಲ್ಲಿ ತುಂಬಿಸಿ ಸಾಗಾಟ, ಬಂಧನ!
– ಪುತ್ತೂರು: ರೈಲಿನಡಿ ಬಿದ್ದು ವ್ಯಕ್ತಿ ಭೀಕರ ಸಾವು
– ಪಡುಬಿದ್ರಿ: ಸಾಲಭಾದೆ ಯುವಕನೋರ್ವ ಆತ್ಮಹತ್ಯೆ
NAMMUR EXPRESS NEWS
ಕಾಸರಗೋಡು : ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಆರೋಪಿ ಸಹಿತ ಸುಮಾರು 30 ಕಿಲೋ ಗಾಂಜಾವನ್ನು ಪೊಲೀಸರು ವಶ ಪಡಿಸಿಕೊಂಡ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಬೋವಿಕ್ಕಾನ ಪೊವ್ವಲ್ ನ ಬಾಸಿತ್ (35) ಎಂದು ಗುರುತಿಸಲಾಗಿದೆ. ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಕುನಿಯ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಪೆರಿಯ ಕಡೆಯಿಂದ ಬಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಗಾಂಜಾವನ್ನು ಪ್ಲಾಸ್ಟಿಕ್ ಕವರ್ ಗಳಲ್ಲಿ ತುಂಬಿಸಿ ಸಾಗಾಟ ಮಾಡಲಾಗುತ್ತಿತ್ತು. ಈ ಪ್ರಕರಣ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
– ಪುತ್ತೂರು: ರೈಲಿನಡಿ ಬಿದ್ದು ವ್ಯಕ್ತಿ ಭೀಕರ ಸಾವು
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಕಬಕ ಎಂಬಲ್ಲಿ ಸಂಭವಿಸಿದೆ.
ಮೃತರನ್ನು ಕಲ್ಲಾಜೆ ಕೆದಿಲ ಗ್ರಾಮದ ಭರತ್ ಪೂಜಾರಿ (67) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ರೈಲ್ವೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
– ಪಡುಬಿದ್ರಿ: ಸಾಲಭಾದೆ ಯುವಕನೋರ್ವ ಆತ್ಮಹತ್ಯೆ
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಸಾಲಬಾಧೆಗೆ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಆತ್ಮಹತ್ಯೆ ಶರಣಾದ ವ್ಯಕ್ತಿಯನ್ನು ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್ನ ನಸ್ರುಲ್ಲಾ(29) ಎಂದು ತಿಳಿಯಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ನಸ್ರುಲ್ಲಾ ಅವರು 3 ತಿಂಗಳ ಹಿಂದೆ ಊರಿಗೆ ಮರಳಿದ್ದರು. ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ, ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಬ್ಯಾಂಕ್ ನವರು, ಸಾಲದವರು ಆತನ ಮನೆಗೆ ಬಂದು ಹೋಗುತ್ತಿದ್ದರು. ಇದರಿಂದ ಅವರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ತಮ್ಮ ಪತ್ನಿಯ ಆಭರಣಗಳನ್ನೂ ಅಡವಿಟ್ಟಿದ್ದ ನಸ್ರುಲ್ಲಾ ಬುಧವಾರ ಕೆಲ ಚಿನ್ನಾಭರಣಗಳನ್ನು ಬಿಡಿಸಿಕೊಂಡು ಬಂದಿದ್ದರು. ಬುಧವಾರ ಸಂಜೆಯ ವೇಳೆ ಪತ್ನಿಯೊಂದಿಗೆ ಜಗಳವಾಡಿ, ತನ್ನ ಮೊಬೈಲನ್ನು ಪುಡಿ ಮಾಡಿ ನೇರ ತಮ್ಮ ಬೆಡ್ ರೂಂಗೆ ತೆರಳಿ ಫ್ಯಾನಿಗೆ ಚೂಡಿದಾರದ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ