ತೀರ್ಥಹಳ್ಳಿ ತಾಲ್ಲೂಕು ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜು!
– ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿದ್ಯಾರ್ಥಿ ಎಚ್. ವಿ. ವಂಶಿಕ್ ಪ್ರಭು!
– ಉದ್ಘಾಟನೆ ಮಾಡಲಿರುವ ತೀರ್ಥಹಳ್ಳಿಯ ಹೆಮ್ಮೆಯ ಕುವರಿ ಮಾನ್ಯ ಎನ್.ಎಂ.
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಾರ್ವಜನಿಕ ಶಿಕ್ಷಣ ಇಲಾಖೆ, ತೀರ್ಥಹಳ್ಳಿ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಟ್ಟೆ ಹಕ್ಲು, ತಾಲ್ಲೂಕು ಜಾನಪದ ಪರಿಷತ್ತು, ತೀರ್ಥಹಳ್ಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಜ.11ರಂದು ಶನಿವಾರ ಬೆಳಿಗ್ಗೆ 9-30ಕ್ಕೆ ಕಟ್ಟೆಹಕ್ಲು ಸ. ಹಿ.ಪ್ರಾ. ಶಾಲೆ ಆವರಣದಲ್ಲಿ 8ನೇ ವರ್ಷದ ತಾಲ್ಲೂಕು ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ.
ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿದ್ಯಾರ್ಥಿ ಎಚ್. ವಿ. ವಂಶಿಕ್ ಪ್ರಭು!
ಸಮ್ಮೇಳನದ ಸರ್ವಾಧ್ಯಕ್ಷರಾಗಿ ತಾಲ್ಲೂಕಿನ ಹೊದಲದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಎಚ್. ವಿ. ವಂಶಿಕ್ ಪ್ರಭು ಅವರು ಆಯ್ಕೆಯಾಗಿದ್ದಾರೆ. ವಂಶಿಕ್ ಪ್ರಭು ಅವರು ಹೊದಲದ ವಿಶ್ವನಾಥ ಪ್ರಭು ಹಾಗೂ ಅನುಶ್ರೀ ಅವರ ಪುತ್ರ ವಂಶಿಕ್ ಎಳವೆಯಲ್ಲಿಯೇ ಸಾಹಿತ್ಯ ಮತ್ತು ಬರವಣಿಗೆಯ ಆಸಕ್ತಿ ಬೆಳೆಸಿಕೊಂಡಿರುವವರಾಗಿದ್ದಾರೆ. ವಂಶಿಕ್ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜ ಸ್ಪರ್ಧೆಯಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ಗ್ರಾಮ ಪಂಚಾಯತಿಯ ಗ್ರಂಥಾಲಯ ವತಿಯಿಂದ ಜರಗಿದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದಿದ್ದು, ಊರಿಗೆ ಹೆಮ್ಮೆಯ ವಿಚಾರವಾಗಿದೆ.
– ಉದ್ಘಾಟನೆ ಮಾಡಲಿರುವ ತೀರ್ಥಹಳ್ಳಿಯ ಹೆಮ್ಮೆಯ ಕುವರಿ ಮಾನ್ಯ ಎನ್.ಎಂ.
ಕಾರ್ಯಕ್ರಮವನ್ನು ಕಟ್ಟೆಹಕ್ಲು ಸ.ಹಿ.ಪ್ರಾ. ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಕು. ಮಾನ್ಯ ಎನ್.ಎಂ.ಉದ್ಘಾಟಿಸಲಿದ್ದಾರೆ. ಮಾನ್ಯ ಶೆಡ್ಗಾರಿನ ಎನ್.ಆರ್. ಮಹೀಂದ್ರ ಜ್ಯೋತಿ ಅವರ ಪುತ್ರಿ ಮಾನ್ಯ ಕಳೆದ ಸಾಲಿನಲ್ಲಿ | ತೀರ್ಥಹಳ್ಳಿ ತಾಲ್ಲೂಕು ಮಟ್ಟದ ಕ್ರೀಡಾ ಕೂಟದಲ್ಲಿ 400 ಮೀ. ಓಟದಲ್ಲಿ ಪ್ರಥಮ, ದಲ್ಲಿ ಪ್ರಥಮ ಸ್ಥಾನಗಳನ್ನು ಪಡೆಯುವ ಮೂಲಕ ಬಾಲಕಿಯರ ವಿಭಾಗದಲ್ಲಿ ತಾಲೂಕು ಮಟ್ಟದ ವೈಯಕ್ತಿಕ ಸಮಗ್ರ ಪ್ರಶಸ್ತಿ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. 600 ಮೀ. ಓಟದಲ್ಲಿ ದ್ವಿತೀಯ, ಎತ್ತರ ಜಿಗಿತ ಸಮ್ಮೇಳನದ ಮುಖ್ಯ ಅತಿಥಿಗಳಾಗಿ ಸಾಲ್ಗಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಮತಾ ಉಮೇಶ್, ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ. ಮಂಜುನಾಥ್, ತೀರ್ಥಹಳ್ಳಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್, ತೀರ್ಥಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ರೇಣುಕಾ ಎಂ. ಹೆಗಡೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಟಿ.ಕೆ.ರಮೇಶ್ ಶೆಟ್ಟಿ, ಶಾಲಾಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಕಾಶ್ ನಾಯ್ಕ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎ.ಜಿ.ಶ್ರೀದರ್, ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀದೇವಿ ಶೇನ್ಸಾರ್, ತಾಲೂಕು ಜಾನಪದ ಪರಿಷತ್ತು ಅಧ್ಯಕ್ಷೆ ಲೀಲಾವತಿ ಜಯಶೀಲ ಮುಂತಾದವರು ಭಾಗವಹಿಸಲಿದ್ದಾರೆ. ಸಾಹಿತ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ವಿನಂತಿಸಿದ್ದಾರೆ.