ಸಿ.ಟಿ ರವಿಗೆ ಬೆದರಿಕೆ ಪತ್ರ..!
– ಮನೆಗೆ ನುಗ್ಗಿ ಹೊಡೆಯೋದಾಗಿ,ಕೊಲ್ಲೋದಾಗಿ ಬೆದರಿಕೆ ಪತ್ರ
– ಅನಾಮಧೇಯ ಬೆದರಿಕೆ ಪತ್ರ ಹಿನ್ನೆಲೆ ದೂರು ದಾಖಲಿಸಿದ ಸಿ.ಟಿ ರವಿ
NAMMUR EXPRESS NEWS
ಚಿಕ್ಕಮಗಳೂರು: ಬೆಳಗಾವಿ ಅಧಿವೇಶನಲ್ಲಿ ಬಿಜೆಪಿ ಪರಿಷತ್ ಸದಸ್ಯ ಸಿ. ಟಿ ರವಿ ಲಕ್ಷ್ಮೀ ಹೆಬ್ಬಾಳ್ಳರ್ಗೆ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿಗೆ ಅನಾಮಧೇಯ ಜೀವ ಬೆದರಿಕೆ ಪತ್ರವೊಂದು ಬಂದಿದೆ. ಈ ಹಿನ್ನೆಲೆಯಲ್ಲಿ ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಬೆದರಿಕೆ ಪತ್ರದಲ್ಲೇನಿದೆ..??!
ಚಿಕ್ಕಮಗಳೂರಿನಿಂದ ಬೆಳಗಾವಿಗೆ ಬಂದು ಅಭಿನೇತ್ರಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ಕೈಕಾಲು ಮುರಿಯುತ್ತೇವೆ. ನಿನ್ನ ಪ್ರಾಣ ತಗೆಯುತ್ತೇವೆ. ನಿನ್ನ ಮಗನನ್ನು ಸಾಯಿಸುತ್ತೇವೆ.