ನಾಳೆ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬಿಸಿಯೂಟ ತಯಾರಕರ ಪ್ರತಿಭಟನೆ!
– ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ!
– ಅಳಲು ತೋಡಿಕೊಂಡು ಮುಷ್ಕರಕ್ಕೆ ಸಾಜ್ಜಾಗಿರುವ ಮಹಿಳೆಯರು!
NAMMUR EXPRESS NEWS
ತೀರ್ಥಹಳ್ಳಿ: ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ತೀರ್ಥಹಳ್ಳಿ ಸಮಿತಿಯಿಂದ ಜ. 13ರಂದು ಸೋಮವಾರ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ಕುಶಾವತಿ ಪಾರ್ಕ್ ನಿಂದ ಹೊರಟು ಬಿಸಿಯೂಟ ತಯಾರಿಸುವ ಮಹಿಳೆಯರು ಆಗುಂಬೆ ಸ್ಟಾಂಡ್ನಲ್ಲಿ ಪ್ರತಿಭಟನೆ ನಡೆಸಿ ಮೆರವಣಿಗೆಯ ಮೂಲಕ ತಾಲ್ಲೂಕು ಕಚೇರಿಗೆ ತಲುಪಿ ತಹಶೀಲ್ದಾರ್ ಕಚೇರಿಯ ಮ್ಯಾನೇಜರ್ಗೆ ಮನವಿ ಸಲ್ಲಿಸಲು ಸಾಜ್ಜಾಗಿದ್ದಾರೆ.
ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಬಿಸಿಯೂಟ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರು ಯಾವುದೇ ಸೌಲಭ್ಯಗಳಿಲ್ಲದೇ ದುಡಿಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಸೇರಿ ಅಡುಗೆಯವರಿಗೆ ₹3,700 ಗೌರವಧನ ನೀಡುತ್ತಿದ್ದು, ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ’ ಎಂದು ಮಹಿಳೆಯರು ಅಳಲು ತೋಡಿಕೊಂಡು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಬಿಸಿಯೂಟ ತಯಾರಿಸುವ ಮಹಿಳೆಯರಿಗೆ ಕೆಲಸದ ಭದ್ರತೆ ಒದಗಿಸಬೇಕು ಹಾಗೂ ವೇತನ ಹೆಚ್ಚಿಸಬೇಕು ಎಂದು ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಬಿಸಿಯೂಟ ತಯಾರಕರ ಪಾಡು ಯಾರು ಕೇಳದಂತಾಗಿದೆ. ದಿನನಿತ್ಯ ಮಕ್ಕಳಿಗಾಗಿ ದುಡಿದರೂ ಅವರ ಕಷ್ಟಕ್ಕೆ ಸ್ಪಂದಿಸಿ ನೆರವಾಗುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆಯೇ? ಎಂದು ಪ್ರಶ್ನೆ ಮಾಡಿ ಪ್ರತಿಭಟನೆ ನಡೆಸಲು ಬಿಸಿಯೂಟ ತಯಾರಕರ ದಂಡು ರೆಡಿಯಾಗಿದೆ. ಆದ್ದರಿಂದ ಜ. 13ರ ದಂದು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆಯುವ ಮುಷ್ಕರದಲ್ಲಿ ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಇರುವ ಎಲ್ಲಾ ಬಿಸಿಯೂಟ ಕಾರ್ಯಕರ್ತೆಯರು ಪಾಲ್ಗೊಳ್ಳಲಿದ್ದಾರೆ. ಯಾವುದೇ ಕಾರಣಕ್ಕೂ ಬಿಸಿಯೂಟ ಕಾರ್ಯಕರ್ತೆಯವರಲ್ಲಿ ಆ ದಿನದಂದು ಅಡುಗೆ ಮಾಡಿಸದೇ, ಬಿಸಿಯೂಟಕ್ಕೆ ಬದಲಿ ವ್ಯವಸ್ಥೆ ಮಾಡಿಕೊಳ್ಳಬೇಕಾಗಿ ಈ ಮೂಲಕ ವಿನಂತಿಸಿಕೊಳ್ಳಲಾಗಿದೆ.
ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷರು ಅಕ್ಕಮ್ಮ ಜಿ. ಜಿ, ಪ್ರಧಾನ ಕಾರ್ಯದರ್ಶಿ ಪರಮೇಶ ಹೊಸಕೊಪ್ಪ, ತಾಲ್ಲೂಕು ಅಧ್ಯಕ್ಷರು ಆಶಾ, ಕಾರ್ಯದರ್ಶಿ ಕಲಾವತಿ, ಉಪಕಾರ್ಯದರ್ಶಿ ಕಲಾವತಿ, ಉಪಾಧ್ಯಕ್ಷರು ವಿನಂತಿ, ಸಹ ಕಾರ್ಯದರ್ಶಿ ಶೋಭಾ, ಹಾಗೂ ಖಜಾಂಚಿ ಪದ್ಮಾವತಿಯವರು ಭಾಗವಹಿಸಲಿದ್ದಾರೆ. ಸಾರ್ವಜನಿಕರೂ ಈ ಮುಷ್ಕರಕ್ಕೆ ಸಹರಿಕರಿಸಿ ಪಾಲ್ಗೊಳ್ಳಬೇಕಾಗಿ ಈ ಮೂಲಕ ವಿನಂತಿಸಿಕೊಳ್ಳಲಾಗಿದೆ.