ಕಳಸದಲ್ಲಿ “ನಂದಿ ರಥಯಾತ್ರೆ”..!!
– ಶೋಭಾಯಾತ್ರೆ ಮತ್ತು ವಿಷ್ಣು ಸಹಸ್ರನಾಮ ಪಠಣ
– 88 ದಿನಗಳ ಕಾಲ ರಾಜ್ಯದ್ಯಂತ ನಡೆಯಲಿರುವ ರಥ ಯಾತ್ರೆ
NAMMUR EXPRESS NEWS
ಕಳಸ: ರಾಜ್ಯಾದ್ಯಂತ ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್(ರಿ) ನ ಸಹಯೋಗದಲ್ಲಿ “ನಂದಿ ಯಾತ್ರೆ” ಎಂಬ ಶೋಭಾಯಾತ್ರೆ ಹಾಗೂ ವಿಷ್ಣು ಸಹಸ್ರನಾಮ ಪಠಣ ನಡೆಯುತ್ತಿದ್ದು. ದಿನಾಂಕ 18/01/2025 ರ ಶನಿವಾರದಂದು ಈ ರಥ ಯಾತ್ರೆ ಕಳಸಕ್ಕೆ ಆಗಮಿಸಲಿದೆ. ಕಲಸೇಶ್ವರ ಸ್ವಾಮಿ ದೇವಸ್ಥಾನದಿಂದ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ನಡೆಯಲಿರುವ ನಂದಿ ರಥ ಯಾತ್ರೆಯ ಶೋಭಾಯಾತ್ರೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಷ್ಣು ಸಹಸ್ರನಾಮ ಪಠಣ ನಡೆಯಲಿದೆ. 88 ದಿನಗಳ ಕಾಲ ರಾಜ್ಯಾದ್ಯಂತ ನಡೆಯುವ ರಥ ಯಾತ್ರೆಯಲ್ಲಿ ಸುಮಾರು ಒಂದು ಕೋಟಿ ಗೋಮಯ ಹಣತೆ ಬೆಳಗುವುದರ ಮೂಲಕ ಮನೆ,ಮನ,ಪರಿಸರವನ್ನು ಸ್ವಚ್ಛಗೊಳಿಸುವ ಸಂಕಲ್ಪವನ್ನು ಟ್ರಸ್ಟ್ ಹೊಂದಿದೆ.
ನಂದಿ ರಥಯಾತ್ರೆಯ ಉದ್ದೇಶವೇನು..!??
ವಿಷ ಮುಕ್ತ ಗಾಳಿ, ಮಣ್ಣು, ಆಹಾರ, ಪ್ರಕೃತಿ, ಪರಿಸರ ಸಂರಕ್ಷಣೆ, ಪಂಚಗವ್ಯ ಚಿಕಿತ್ಸೆ, ರೋಗಮುಕ್ತ ಭಾರತ, ಸಾಮೂಹಿಕ 1,11,108 ವಿಷ್ಣು ಸಹಸ್ರನಾಮ ಪಾರಾಯಣ,ಒಂದು ಕೋಟಿ ಗೋಮಯ ದೀಪ ಬೆಳಗಿಸುವುದು, ನಂದಿ ಪೂಜೆ, ಗೋಕಥೆ, ಮನೆ ಮನೆಯಲ್ಲಿ ಗೋವು, ದೇಶಿ ಗೋಮಾತೆಯ ಮಹಿಮೆ ಜನರಿಗೆ ತಿಳಿಸುವುದು, ದೇಶಿ ಗೋಮಾತೆ ಹಾಗೂ ಭೂಮಾತೆಗೆ ಇರುವ ಸಂಬಂಧ ಜನರಿಗೆ ತಿಳಿಸುವುದು, ಗೋಮಾತೆ ವಿಶ್ವ ಮಾತೆ-ಭಾರತ ವಿಶ್ವಗುರು, ಗೋಮಾತೆಗೆ ರಾಷ್ಟ್ರೀಯ ಮಾನ್ಯತೆ ದೊರೆಯುವಂತಾಗಲು, ಸಹಜ ಕೃಷಿ ವಿಸ್ತರಣೆ, ಸ್ವದೇಶಿ/ಗದ್ಯ ಉತ್ಪನ್ನ ಬಳಕೆಯ ಪ್ರಚಾರ, ಮಣ್ಣು ಉಳಿಸುವ ನಂದಿ ಕೃಷಿಕರ ಸಂಖ್ಯೆ ಹೆಚ್ಚಿಸುವುದು. ದೇಶಿಬೀಜ ಸಂರಕ್ಷಣೆ, ಧರ್ಮ ಜಾಗೃತಿ, ಸಾಮಾಜಿಕ ಸಾಮರಸ್ಯ, ಗ್ರಾಮ ವಿಕಾಸ, ಭಾರತೀಯ ಕುಟುಂಬ ಪದ್ಧತಿ ಸಂರಕ್ಷಣೆ, ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವುದು, ಉದ್ಯೋಗ ಸೃಷ್ಟಿ, ಋಣಮುಕ್ತ ಭಾರತ, ಸಮೃದ್ಧ ಭಾರತ, ವಿಶ್ವಗುರು ಭಾರತ ಇವು ಈ ಯಾತ್ರೆಯ ಉದ್ದೇಶವಾಗಿದೆ.