ಫೆ.1ಕ್ಕೆ ಕೇಂದ್ರ ಸರ್ಕಾರದ ಬಜೆಟ್..!
– ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಆಯವ್ಯಯ ಮಂಡನೆ
– ಮಾ.2ನೇ ವಾರ ಮತ್ತು ಏಪ್ರಿಲ್ ಮೊದಲ ವಾರ ಬಜೆಟ್ ಅಧಿವೇಶನ
NAMMUR EXPRESS NEWS
ದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಭಾಗವು ಜನವರಿ 31 ಮತ್ತು ಫೆಬ್ರವರಿ 13ರ ಮಧ್ಯೆ ನಡೆಯುವ ಸಾಧ್ಯತೆ ಇದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.1ರಂದು ಎಂಟನೇ ಬಾರಿಗೆ ಆಯವ್ಯಯ ಮಂಡನೆ ಮಾಡಲಿದ್ದಾರೆ. ಸಂಪ್ರದಾಯದಂತೆ ಜ.31ರಂದು ರಾಷ್ಟ್ರಪತಿ ದೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯ ಸಭೆಯ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಆರಂಭವಾಗಲಿದೆ. ಬಜೆಟ್ ಅಧಿವೇಶನದ ಎರಡನೇ ಭಾಗವು ಮಾರ್ಚ್ ಎರಡನೇ ವಾರ ಮತ್ತು ಏಪ್ರಿಲ್ ಮೊದಲ ವಾರದ ಮಧ್ಯೆ ನಡೆಯಲಿದೆ. ಅಧಿವೇಶನದ ಮೊದಲ ಭಾಗವನ್ನು ಉಭಯ ಸದನಗಳಲ್ಲಿ ಅಧ್ಯಕ್ಷರ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಚರ್ಚೆ ನಡೆಯಲಿದೆ. ಅಧಿವೇಶನ ಪ್ರಧಾನ ಮಂತ್ರಿಯವರ ಉತ್ತರದೊಂದಿಗೆ ಕೊನೆಗೊಳ್ಳಲಿದೆ.