ಕರ್ನಾಟಕ ಕ್ರೀಡಾಕೂಟ ಸಮಾರೋಪ : ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಿ
ಉಡುಪಿ, ಜನವರಿ 20 (ಕವಾ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭವು ಜನವರಿ 23 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸದರಿ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ಗೌರವಾನ್ವಿತ ಥಾವರ್ ಚಂದ್ ಗೆಹೋಟ್, ರಾಜ್ಯದ ಗೃಹ ಸಚಿವರಾದ ಡಾ.ಜಿ ಪರಮೇಶ್ವರ ಹಾಗೂ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಆಳ್ವಾಸ್ ಮೂಡಬಿದಿರೆ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟಿçÃಯ ಮತದಾರರ ದಿನಾಚರಣೆ
ಉಡುಪಿ, ಜನವರಿ 20 (ಕವಾ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ ಕಾರ್ಯಕ್ರಮವು ಜನವರಿ 25 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಿರಣ್ ಎಸ್. ಗಂಗಣ್ಣನವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್, ಅಪರ ಜಿಲ್ಲಾಧಿಕಾರಿ (ಪ್ರಭಾರ) ನಾಗರಾಜ ವಿ ನಾಯಕ್, ಉಡುಪಿ ತಾಲೂಕು ತಹಶೀಲ್ದಾರ್ ಪಿ.ಆರ್ ಗುರುರಾಜ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ಜಾಂಯ್ಟ್ ಎನ್ಟೆçನ್ಸ್ ಎಕ್ಸಾಮಿನೇಷನ್ : ನಿಷೇಧಾಜ್ಞೆ ಜಾರಿ
ಉಡುಪಿ, ಜನವರಿ 20 (ಕವಾ): ಜಿಲ್ಲೆಯಲ್ಲಿ ಐ.ಆನ್ ಡಿಜಿಟಲ್ ಝೋನ್, ಐ.ಡಿ.ಝಡ್ ಮಿಲ್ಕ್ ಡೈರಿ ರೋಡ್, ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್, ಎಂ.ಐ.ಟಿ ಕ್ಯಾಂಪಸ್, ಈಶ್ವರ ನಗರ, ಮಣಿಪಾಲ ಮತ್ತು ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇಲ್ಲಿ ಜನವರಿ 22 ರಿಂದ 24 ರ ವರೆಗೆ ಮತ್ತು 28 ರಿಂದ 30 ರ ವರೆಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ಜಾಂಯ್ಟ್ ಎನ್ಟೆçನ್ಸ್ ಎಕ್ಸಾಮಿನೇಷನ್ ನಡೆಯಲಿರುವ ಹಿನ್ನೆಲೆ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಈ ಕೆಳಕಂಡAತೆ ಷರತ್ತು ವಿಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ರಿಂದ 300 ಮೀಟರ್ಗಳ ವ್ಯಾಪ್ತಿಯಲ್ಲಿರುವ ಸೈಬರ್ ಕೆಫೆ, ಫೋಟೋಕಾಪಿ, ಪ್ರಿಂಟಿAಗ್, ಜೆರಾಕ್ಸ್ ಅಂಗಡಿಗಳನ್ನು ಮುಚ್ಚಬೇಕು. ಯಾವುದೇ ಸಾರ್ವಜನಿಕರು 5 ಜನ ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ನಿಷೇಧಿತ ಪ್ರದೇಶವೆಂದು ಜಾರಿಗೊಳಿಸಿದ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಗುಂಪು ಸೇರುವುದು ಅಥವಾ ತಿರುಗುವುದು, ಅನುಮಾನಾಸ್ಪದ ವ್ಯಕ್ತಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವುದು ಹಾಗೂ ಪರೀಕ್ಷಾ ಕೇಂದ್ರದ ಸುತ್ತ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿರುತ್ತದೆ.
ಮಿನಿ ಉದ್ಯೋಗ ಮೇಳ
ಉಡುಪಿ, ಜನವರಿ 20 (ಕವಾ): ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜನವರಿ 21 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ವಸತಿ ಶಾಲೆಗಳಲ್ಲಿ ಅರ್ಜಿ ಆಹ್ವಾನ
ಉಡುಪಿ, ಜನವರಿ 20 (ಕವಾ): ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾAಧಿ, ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 2025-26 ನೇ ಸಾಲಿಗೆ 6 ನೇ ತರಗತಿ ದಾಖಲಾತಿಗಾಗಿ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಗಾಗಿ ಹತ್ತಿರದ ವಸತಿ ಶಾಲೆಗಳಲ್ಲಿ ಜನವರಿ 25 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಯು ಫೆಬ್ರವರಿ 15 ರಂದು ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರುಗಳಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರೂರು ಮೊ.ನಂ: 9482625925, ಕಳತ್ತೂರು ಮೊ.ನಂ: 9535225409, ಪಟ್ಲ ಹಿರೇಬೆಟ್ಟು ಮೊ.ನಂ; 8970292710, ಹೆರಂಜಾಲು ಮೊ.ನಂ: 8073860074, ಮಿಯ್ಯಾರು ಮೊ.ನಂ: 9686898326 ಹಾಗೂ ಯಡ್ಯಾಡಿ-ಮತ್ಯಾಡಿ ಮೊ.ನಂ: 9901519126, ಶಂಕರನಾರಾಯಣ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಮೊ.ನಂ: 6363120177, ಸಿದ್ದಾಪುರದ ಇಂದಿರಾಗಾAಧಿ ವಸತಿ ಶಾಲೆ ಮೊ.ನಂ: 9482487266 ಮತ್ತು ವಡ್ಡರ್ಸೆ ನಾರಾಯಣ ಗುರು ವಸತಿ ಶಾಲೆ ಮೊ.ನಂ: 8867415291 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಬ್ರಹ್ಮಾವರ ತಾಲೂಕು ಕೃಷಿಕ ಸಮಾಜ : ನೂತನ ಪದಾಧಿಕಾರಿಗಳ ಆಯ್ಕೆ
ಉಡುಪಿ, ಜನವರಿ 20 (ಕವಾ): ಬ್ರಹ್ಮಾವರ ತಾಲೂಕು ಕೃಷಿಕ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಕುರಿತ ಚುನಾವಣಾ ಪ್ರಕ್ರಿಯೆಯು ಇತ್ತೀಚೆಗೆ ಉಡುಪಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆದಿದ್ದು, ಅಧ್ಯಕ್ಷರಾಗಿ ಪಿ.ವೈಕುಂಠ ಹೇರ್ಳೆ, ಉಪಾಧ್ಯಕ್ಷರಾಗಿ ಸುದರ್ಶನ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಕಾಮತ್, ಖಜಾಂಜಿಯಾಗಿ ಉಮಾಕಾಂತ್ ಕಾಮತ್ ಮತ್ತು ಜಿಲ್ಲಾ ಪ್ರತಿನಿಧಿಯಾಗಿ ಪ್ರದೀಪ್ ಹೆಬ್ಬಾರ್ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಬ್ರಹ್ಮಾವರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಅಕ್ಷರ ಜ್ಞಾನದ ಜೊತೆಗೆ ನಾಟಕಗಳು ವಿದ್ಯಾರ್ಥಿಗಳಿಗೆ ಮತ್ತು ಯುವಕರಿಗೆ ದಾರಿದೀಪ : ಡಾ.ಮಂಜುನಾಥ ಕೋಟ್ಯಾನ್
ಉಡುಪಿ, ಜನವರಿ 20 (ಕವಾ): ಪ್ರಸ್ತುತ ಕಾಲಘಟ್ಟದಲ್ಲಿ ಅಕ್ಷರ ಜ್ಞಾನದ ಜೊತೆಗೆ ನಾಟಕಗಳು ವಿದ್ಯಾರ್ಥಿಗಳಿಗೆ ಮತ್ತು ಯುವಕರ ಬದುಕಿಗೆ ದಾರಿದೀಪವಾಗುತ್ತವೆ ಮತ್ತು ಮುಂದಿನ ಪೀಳಿಗೆಗೆ ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ ಕೋಟ್ಯಾನ್ ಹೇಳಿದರು.
ಅವರು ಭಾನುವಾರ ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್ನ ಬಯಲು ರಂಗಮAದಿರದಲ್ಲಿ ಯಕ್ಷ ರಂಗಾಯಣ ಕಾರ್ಕಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಆಶ್ರಯದಲ್ಲಿ ನಡೆದ ಕಲ್ಲರಳಿ ಹೂವಾಗಿ-ಮೂರು ದಿನದ ಮಕರಾಯನ ನಾಟಕೋತ್ಸವವನ್ನು ಜಂಬೆ ವಾದ್ಯ ಬಾರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.
ನಾಟಕ, ಭಾಷೆ, ಕನ್ನಡ ಹಾಗೂ ಸಂಸ್ಕೃತಿಗಳನ್ನು ಬದುಕಲ್ಲಿ ಅಳವಡಿಸಿಕೊಳ್ಳಬೇಕು. ನಾಟಕಗಳು ವ್ಯಕ್ತ-ಅವ್ಯಕ್ತ, ದೃಶ್ಯ-ಅದೃಶ್ಯ ಮತ್ತು ಶ್ರಾವ್ಯ-ಅಶ್ರಾವ್ಯವನ್ನು ಉದ್ದೀಕರಿಸುತ್ತವೆ. ಇಂದಿನ ಯುವಕರು ಪಠ್ಯದ ಹೊರತು ಯೋಚಿಸಿ, ಕನ್ನಡ ನಾಟಕಗಳನ್ನು ನೋಡಿ ಮನದಟ್ಟು ಮಾಡಿಕೊಂಡರೆ ಸಮಾಜಕ್ಕೆ ಉತ್ತಮ ಪ್ರಜೆಯಾಗುವುದರಲ್ಲಿ ಸಂಶಯವೇ ಇಲ್ಲ ಎಂದ ಅವರು, ಯು.ಆರ್.ಅನಂತಮೂರ್ತಿ ಮತ್ತು ಗಿರೀಶ್ ಕಾರ್ನಾಡ್ ನಂತಹ ವ್ಯಕ್ತಿಗಳು ಕೂಡ ನಾಟಕ ರಂಗವನ್ನು ಪ್ರೊತ್ಸಾಹಿಸುವುದರ ಜೊತೆಗೆ ನಾಟಕಗಳ ಕುರಿತು ಬಹಳ ಆಸಕ್ತಿ ಹೊಂದಿದ್ದರು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯಕ್ಷ ರಂಗಾಯಣದ ನಿರ್ದೇಶಕ ಬಿ.ಆರ್.ವೆಂಕಟರಮಣ ಐತಾಳ ಮಾತನಾಡಿ, ಯಕ್ಷಗಾನದ ಜೊತೆಗೆ ನಾಟಕಗಳು ಕೂಡ ಜೀವನದಲ್ಲಿ ಜ್ಞಾನವನ್ನು ನೀಡುತ್ತವೆ. ಈ ನಾಟಕೋತ್ಸವದಲ್ಲಿ ಬಹಳಷ್ಟು ಜನ ಉತ್ತರ ಕರ್ನಾಟಕದ ಕಲಾವಿದರು ಭಾಗವಹಿಸಿದ್ದಾರೆ ಹಾಗೂ ಅವರು ತಮ್ಮ ಜವಾರಿ ಭಾಷೆಯ ವಿಡಂಬನೆಯನ್ನು ಅರ್ಥೈಸಲಿದ್ದಾರೆ. ನಾಟಕಗಳನ್ನು ನೋಡುವ ಮೂಲಕ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ನಿರ್ದಿಗಂತ ಸಂಸ್ಥೆಯ ವ್ಯವಸ್ಥಾಪಕ ಗಣೇಶ್ ಭೀಮನಕೋಟೆ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮತ್ತು ಯಕ್ಷ ರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಸ್ವಾಗತಿಸಿ, ನಿವೃತ್ತ ಶಿಕ್ಷಕ ವಸಂತ ನಿರೂಪಿಸಿ ವಂದಿಸಿದರು.
ನಮ್ಮ ಕ್ಲಿನಿಕ್ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ
ಉಡುಪಿ, ಜನವರಿ 20 (ಕವಾ): ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಿ.ಎಂ.ಎ.ಬಿ.ಹೆಚ್.ಐ.ಎA ಯೋಜನೆಯಡಿ ಹೊಸದಾಗಿ ಅನುಮೋದನೆಗೊಂಡ ನಮ್ಮ ಕ್ಲಿನಿಕ್ಗಳಲ್ಲಿ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ udupi.nic.inಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಸಂಘದ ಕಚೇರಿ ಪ್ರಕಟಣೆ ತಿಳಿಸಿದೆ.