- ಜಿಲ್ಲೆಯಲ್ಲಿ ಘನತೆವೆತ್ತ ರಾಜ್ಯಪಾರ ಪ್ರವಾಸ ಕಾರ್ಯಕ್ರಮ!
- ಜ. 23ಕ್ಕೆ ಉಡುಪಿ ನಗರಕ್ಕೆ ಆಗಮನ!
- ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗಿ!
ಉಡುಪಿ: ಕರ್ನಾಟಕ ಸರಕಾರದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಜನವರಿ 23 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.
ಜನವರಿ 23 ರಂದು ಮಧ್ಯಾಹ್ನ 2.35 ಕ್ಕೆ ಉಡುಪಿ ನಗರಕ್ಕೆ ಆಗಮಿಸುವ ಅವರು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿಯನ್ನು ತಿಳಿಸಿದ್ದಾರೆ.