ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ..!
– ರಾಜ್ಯದಲ್ಲಿ ಈ ಭಾರಿ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರಲ್ಲ
– ವಿದ್ಯುತ್ ಕೊರತೆ ಉಂಟಾದರೆ ಬೇರೆ ಕಡೆಯಿಂದ ಖರೀದಿಸುತ್ತೇವೆ- ಸಚಿವ ಜಾರ್ಜ್
NAMMUR EXPRESS NEWS
ಬೆಂಗಳೂರು: ಈ ಬಾರಿ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ. ರಾಜ್ಯದಲ್ಲಿ ಬರಗಾಲ ಇದ್ದಾಗಲೇ ಲೋಡ್ ಶೆಡ್ಡಿಂಗ್ ಮಾಡಿಲ್ಲ. ಹೀಗಾಗಿ ಈ ವರ್ಷವೂ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡೋದಿಲ್ಲ” ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು ಒಂದು ವೇಳೆ ವಿದ್ಯುತ್ ಕೊರತೆ ಉಂಟಾದರೆ ಬೇರೆ ಕಡೆಯಿಂದ ವಿದ್ಯುತ್ ಖರೀದಿಸುತ್ತೇವೆ. ಈ ವರ್ಷವೂ ಬೇಡಿಕೆ ಹೆಚ್ಚಾಗಿದೆ. ಈಗ 16 ರಿಂದ 17 ಸಾವಿರ ಮೆಗಾ ವ್ಯಾಟ್ ಬೇಡಿಕೆ ಬರ್ತಾ ಇದೆ. ಕೊರತೆ ಉಂಟಾದರೆ ನಾವು ಬೇರೆ ಕಡೆಯಿಂದ ಖರೀದಿ ಮಾಡುತ್ತೇವೆ ಎಂದಿದ್ದಾರೆ. ಬೇಸಿಗೆ ಬಂದರೆ ಲೋಡ್ ಶೆಡ್ಡಿಂಗ್ ನಿಂದ ಹೈರಾಣಾಗಿದ್ದ ರಾಜ್ಯದ ಜನತೆಗೆ ಇದೊಂದು ಸಿಹಿ ಸುದ್ದಿಯಾಗಿದ್ದು, ಸರ್ಕಾರ ಮುಂದಿನ ದಿನಗಳಲ್ಲಿ ಯಾವ ರೀತಿಯಾಗಿ ಈ ಬಗ್ಗೆ ಮುತುವರ್ಜಿ ವಹಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.