ಶಿವಮೊಗ್ಗ ಫಲಪುಷ್ಪ ಪ್ರದರ್ಶನ ಸೂಪರ್..!
– ಹೂವಿನಲ್ಲಿ ಅರಳಿದ ರಾಷ್ಟ್ರಕವಿ ಕುವೆಂಪುರವರ ಮನೆ
– 4.28 ಲಕ್ಷಕ್ಕೂ ಹೆಚ್ಚು ಹೂವುಗಳ ಬಳಕೆ
– 3 ದಿನ ಸಾವಿರಾರು ಮಂದಿ ಭೇಟಿ: ಇಲಾಖೆ ಉತ್ತಮ ಆಯೋಜನೆ
NAMMUR EXPRESS NEWS
ಶಿವಮೊಗ್ಗ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಶಿವಮೊಗ್ಗ ತೋಟಗಾರಿಕೆ ಇಲಾಖೆ, ಜಿಲ್ಲಾ ಉದ್ಯಾನ ಕಲಾ ಸಂಘ, ಶಿವಮೊಗ್ಗ ಹಾಗೂ ನಬಾರ್ಡ್ ಪ್ರಾಯೋಜಕತ್ವದಲ್ಲಿ ಮಲೆನಾಡ ಕರಕುಶಲ ಉತ್ಸವ ಮತ್ತು ಪುಷ್ಪಸಿರಿ 62ನೇ ಫಲಪುಷ್ಪ ಪ್ರದರ್ಶನ ಜ. 24 ರಿಂದ ಜ. 26ರವರೆಗೆ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್), ಶಿವಮೊಗ್ಗದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಿರುವ ಮೂರು ದಿನಗಳ ಫಲಪುಷ್ಪ ಪ್ರದರ್ಶನ ಅದ್ದೂರಿಯಾಗಿ ಜರುಗಿತು. ವರ್ಣಮಯ ಲೋಕವನ್ನೆ ತೆರದಿಟ್ಟಿರುವ ಫಲಪುಷ್ಪಗಳು, ಹೂವಿನಲ್ಲಿ ಅರಳಿದ ರಾಷ್ಟ್ರಕವಿ ಕುವೆಂಪುರವರ ಕವಿಶೈಲ, ಪುರಾಣ ಪ್ರಸಿದ್ದ ಚಂದ್ರಗುತ್ತಿ ರೇಣುಕಾಂಬೆ ದೇಗುಲ. ಉದ್ದ ಗರಿಬಿಚ್ಚಿ ನರ್ತಿಸುತ್ತಿರುವ ನವಿಲು, ನೋಡುಗರ ಕಣ್ಣನ ಸೆಳೆಯುವ ರಂಗುರಂಗಿನ ಮತ್ತ್ವಗಳು. ಹೌದು, ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ ತೋಟಗಾರಿಕಾ ಇಲಾಖೆ ಕೃಷಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ಹಾಗೂ ಮಲೆನಾಡ ಕರಕುಶಲ ಉತ್ಸವ ದಲ್ಲಿ ಕಂಡು ಬರುತ್ತಿರುವ ದೃಶ್ಯಾವಳಿಗಳಿವು. ತೋಟಗಾರಿಕಾ ಇಲಾಖೆ ಕೃಷಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜ. 24 ರಿಂದ ಮೂರು ದಿನಗಳ ಕಾಲ ನಡೆಯಿತು. ಫಲಪುಷ್ಪ ಪ್ರದರ್ಶನದಲ್ಲಿ ಆರಂಭದಲ್ಲಿಯೇ ಮೇಳದ ಸ್ವಾಗತ ಕಮಾನು ಸ್ವಾಗತಿಸಿದರೆ, ಶಿವಮೊಗ್ಗವನ್ನು ಬಿಂಬಿಸುವ ಆಂಗ್ಲ ಭಾಷೆಯ ಎಸ್ಎಂಜಿ ಸೇವಂತಿಗೆ ಹೂವಿನಲ್ಲಿ ಕಣ್ಣುಕುಕ್ಕುತ್ತಿತ್ತು. ಕೆಂಪು ಗುಲಾಬಿಯಲ್ಲಿ ಮಾಡಿರುವ ಐ ಲವ್ ಶಿವಮೊಗ್ಗ’ ಎಂಬ ಹೃದಯಾಕೃತಿಯ ಕಲಾಕೃತಿ ಎಲ್ಲರನ್ನು ತನ್ನತ್ತ ಸೆಳೆಯುತ್ತಿತ್ತು. ಈ ಬಾರಿ ಗುಲಾಬಿ, ಸೇವಂತಿಗೆ, ಆರ್ಕಿಡ್, ಕಾರ್ನೇಷನ್, ಲಿಲ್ಲೀಸ್, ಪೊಲೀಯೇಜ್ ಮುಂತಾದ ಬಗೆಗಳ 4.80 ಲಕ್ಷ ಹೂವುಗಳನ್ನು ಬಳಸಿ ಕುಪ್ಪಳಿ ಕವಿಶೈಲದ 28 ಅಡಿ ಎತ್ತರದ ಕಲಾಕೃತಿ ಹಾಗೂ ಚಂದ್ರಗುತ್ತಿ ರೇಣುಕಾಂಬೆ ದೇವಾಲಯದ 14 ಅಡಿ ಎತ್ತರದ ಕಲಾಕೃತಿ ನಿರ್ಮಿಸಲಾಗಿದೆ. 45 ಕ್ಕೂ ಹೆಚ್ಚು ಬೊನ್ಸಾಯ್ ಗಿಡಗಳ ಪ್ರದರ್ಶನ ಕೂಡ ನಡೆದಿದೆ.
ಮೂರು ದಿನ ನೂರಾರು ಜನರು ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದು, ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿರುವ ಕವಿಮನೆ, ಕವಿ ಕುವೆಂಪು ಅವರ ಮನೆ, ಸೊರಬ ತಾಲ್ಲೂಕಿನ ಚಂದ್ರಗುತ್ತಿಯ ರೇಣುಕಾಂಬ ದೇವಸ್ಥಾನದ ಪ್ರತಿಕೃತಿಗಳ ಪ್ರದರ್ಶನ ವಿಶೇಷ ಆಕರ್ಷಣೀಯವಾಗಿತ್ತು. ಈ ಅನೇಕ ಸಂದರ್ಶಕರು ಈ ಪ್ರತಿಕೃತಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದು, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಉದ್ಯಾನ ಕಲಾ ಸಂಘ ಜಂಟಿಯಾಗಿ ಪ್ರದರ್ಶನ ನಡೆಯಿತು. ಜೊತೆಗೆ, ಮಲೆನಾಡು ಭಾಗದ ಕಲಾಕೃತಿಗಳ ಪ್ರದರ್ಶನ, ಕರಕುಶಲ ಉತ್ಸವ ಸಾರಸ್ ಮೇಳ ಚಾಲನೆಗೊಂಡಿದೆ. ಅನೇಕ ಕಲಾವಿದರು ತಮ್ಮ ಪ್ರದರ್ಶಿಸುವ ಮಳಿಗೆಗಳನ್ನು ಹಾಕಿದ್ದರ. ಜ್ಯಾಮಿತೀಯ ಮಾದರಿಗಳನ್ನು ಚಿತ್ರಿಸುವ ಸಾಂಪ್ರದಾಯಿಕ ಕಲಾ ಪ್ರಕಾರವಾದ ಹಸೆ ಚಿತ್ತಾರದ ಕಲಾವಿದರನ್ನು ಹೊಂದಿದ್ದು, ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಪ್ರದರ್ಶನವನ್ನು ಉದ್ಘಾಟಿಸಿ, ಪುಷ್ಪ-ಫಲ ಪ್ರದರ್ಶನ ಹಾಗೂ ವಸ್ತುಪ್ರದರ್ಶನದ ವ್ಯವಸ್ಥೆಯನ್ನು ಶ್ಲಾಘಿಸಿದ್ದರು. ಪ್ರದರ್ಶನದಲ್ಲಿ 4.28 ಲಕ್ಷಕ್ಕೂ ಹೆಚ್ಚು ಹೂವುಗಳನ್ನು ಬಳಸಲಾಗಿದೆ. ಪ್ರದರ್ಶನವು ಸ್ಥಳೀಯ ಕರಕುಶಲ ಕಲಾವಿದರಿಗೆ ವೇದಿಕೆಯನ್ನು ಒದಗಿಸಲಾಗಿತ್ತು.