ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿ..!
– ರಾಜ್ಯದಲ್ಲಿ ಫೆ.2 ರಿಂದ ಮತ್ತೆ ಮಳೆ
– ಹಗುರವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ
NAMMUR EXPRESS NEWS
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿ, ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಫೆಬ್ರವರಿ 2 ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಮಾರುತ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವು ಕಡೆ ಫೆಬ್ರವರಿ 2 ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಕೆಲವು ಭಾಗಗಳಲ್ಲಿ ಫೆಬ್ರವರಿ 4 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 30 ರಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಜನವರಿ 31 ಹಾಗೂ ಫೆಬ್ರವರಿ 1 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಧಾರವಾಡ, ವಿಜಯಪುರ, ಹಾವೇರಿ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಕೊಡಗು, ಕೋಲಾರ, ಬೆಂಗಳೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಹಗುರವಾಗಿ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.