- ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮ
- ದೇಗುಲ, ಸ್ಮಾರಕಗಳಿಗೂ ಬಂತು ಹೊಸ ಕಳೆ
NAMMUR EXPRESS NEWS
ಹೊಸಪೇಟೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹೊಸಪೇಟೆ ತಾಲ್ಲೂಕಿನ ವಿಶ್ವವಿಖ್ಯಾತ ಹಂಪಿಯ ಐತಿಹಾಸಿಕ ಸ್ಮಾರಕಗಳು ತ್ರಿವರ್ಣ ಬೆಳಕಿನ ಚಿತ್ತಾರದಲ್ಲಿ ಕಂಗೊಳಿಸಲಾರಂಭಿಸಿವೆ.
ಹಂಪಿಯ ವಿರೂಪಾಕ್ಷ ದೇವಸ್ಥಾನ, ವಿಜಯ ವಿಠಲ ದೇಗುಲದ ಪ್ರಾಂಗಣದಲ್ಲಿರುವ ಕಲ್ಲಿನ ತೇರು, ಸಂಗೀತವನ್ನು ಹೊರಹೊಮ್ಮಿಸುವ ಸಪ್ತಸ್ವರ ಮಂಟಪ, ಕಡಲೆ ಕಾಳು ಗಣಪ, ಸಾಸಿವೆ ಕಾಳು ಗಣಪ, ಸೇರಿದಂತೆ ನಾನಾ ಸ್ಮಾರಕಗಳಿಗೆ ತ್ರಿವರ್ಣದ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಆ.5 ರಿಂದ 15ರವರೆಗೆ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ವ್ಯಾಪ್ತಿಯ ಐತಿಹಾಸಿಕ ದೇಗುಲ, ಸ್ಮಾರಕ ಹಾಗೂ ವಸ್ತು ಸಂಗ್ರಹಾಲಯಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಇದರ ಬೆನ್ನಲ್ಲೇ ಭಾನುವಾರ ಹಂಪಿಯ ಐತಿಹಾಸಿಕ ಸ್ಮಾರಕಗಳಿಗೆ ಕೇಸರಿ, ಬಿಳಿ ಹಾಗೂ ಹಸಿರು ಬಣ್ಣಗಳ ವಿದ್ಯುತ್ ದೀಪದ ಬೆಳಕಿನ ವ್ಯವಸ್ಥೆ ಮಾಡಿರುವುದು ಮೆರಗು ತಂದಿದೆ.
ಶಿವಮೊಗ್ಗದಲ್ಲಿ ಹರ್ ಘರ್ ತಿರಂಗಾ ಅಭಿಯಾನ
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಶಿವಮೊಗ್ಗ ಭಾರತೀಯ ಜನತಾ ಪಕ್ಷದ ವತಿಯಿಂದ ನಡೆದ ಹರ್ ಘರ್ ತಿರಂಗಾ ಬೈಕ್ ರ್ಯಾಲಿಯಲ್ಲಿ ಸಂಸದ ರಾಘವೇಂದ್ರ, ಶಾಸಕರಾದ ಕೆ. ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯರು, ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ರ್ಯಾಲಿಯಲ್ಲಿ ಪಾಲ್ಗೊಂಡರು.