- ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟಕ್ಕೆ ತೊಂದರೆ?
NAMMUR EXPRESS NEWS
ಬೆಂಗಳೂರು : ಮಂಗಳವಾರ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗೋದು ಡೌಟ್ ಇದ್ದು, ಬಿಸಿಯೂಟ ಕಾರ್ಯ ಕರ್ತೆಯರು ಮತ್ತೆ ಹೋರಾಟಕ್ಕಿಳಿದಿದ್ದಾರೆ. ಮಂಗಳವಾರ ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ.
60 ವರ್ಷ ವಯಸ್ಸಾದ ಕಾರ್ಯಕರ್ತೆಯರನ್ನು ವಜಾ ಮಾಡಿದ ಹಿನ್ನೆಲೆ ಮಂಗಳವಾರ ಶಾಲೆಗಳಲ್ಲಿ ಬಿಸಿಯೂಟ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಸುಮಾರು 6,500 ಕಾರ್ಯಕರ್ತೆಯರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಹೀಗಾಗಿ ಮಂಗಳವಾರ ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ. ಮಂಗಳವಾರದಿಂದ ಫ್ರೀಡಂ ಪಾರ್ಕ್ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಿರ್ಧಾರ ಮಾಡಲಾಗಿದೆ.