- ನಕ್ಷೆಗಳ ಪ್ರಿಂಟ್ಔಟ್ ಗೆ ಇನ್ನೂ ಕಚೇರಿಗೆ ಹೋಗಬೇಕಿಲ್ಲ
NAMMUR EXPRESS NEWS
ಬೆಂಗಳೂರು : ಸಾರ್ವಜನಿಕರು ತಮ್ಮ ಜಮೀನಿಗೆ ಸಂಬಂಧಿಸಿದ 11ಇ ಪೋಡಿ, ಭೂ ಪರಿವರ್ತನೆ ಸ್ಕೆಚ್ ಹದ್ದುಬಸ್ತು ಮತ್ತು ಇತರ ನಕ್ಷೆಗಳನ್ನು ಇನ್ನು ಮುಂದೆ ಆನ್ ಲೈನ್ ನಲ್ಲೇ ಪಡೆದುಕೊಳ್ಳಬಹುದು ಎಂದು ಸರ್ವೇ ಮಾಪನ ಮತ್ತು ಭೂ ದಾಖಲೆಗಳ ಆಯುಕ್ತ ಮುನಿಶ್ ಮೌದ್ಗೀಲ್ ತಿಳಿಸಿದ್ದಾರೆ.
ಈ ಸಂಬಂಧ ಸ್ವೀಟ್ ಮಾಡಿರುವ ಅವರು 11ಇ ಪೊಡಿ, ಭೂ ಪರಿವರ್ತನೆ ಸ್ಕೆಚ್ ಹದ್ದುಬಸ್ತು ಮತ್ತು ಇತರೆ ನಕ್ಷೆಗಳಿಗೆ ಅರ್ಜಿ ಸಲ್ಲಿಸಿದ ನಾಗರೀಕರು http://103,138,196,154/service19/Report/ApplicationDetails ವೆಬ್ ಸೈಟ್ ಮೂಲಕ ತಮ್ಮ ಅರ್ಜಿಯ ಸ್ಥಿತಿಗತಿಯನ್ನು ಸಹ ವೀಕ್ಷಿಸಬಹುದು. ಅರ್ಜಿ ಸ್ವೀಕಾರಗೊಂಡು ಸರ್ವೆ ಸಿಬ್ಬಂದಿ ತಮ್ಮ ಜಮೀನಿಗೆ ಬಂದು ಸಂಬಂಧಿಸಿದ ಮಾಪನ ಕಾರ್ಯ ಮುಗಿಸಿ ನಕ್ಷೆ ಅನುಮೋದಿಸಿದ ತಕ್ಷಣ ಇದೇ ವೆಬ್ ಸೈಟ್ ನಲ್ಲಿ ಆ ನಕ್ಷೆಗಳನ್ನು ಸಾರ್ವಜನಿಕರು ಮುದ್ರಣ ಪ್ರತಿ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸುವಾಗ ನಾಗರೀಕರು ಹಣ ಪಾವತಿಸಿರುವ ಕಾರಣ ನಕ್ಷೆ ಪ್ರತಿಗಳನ್ನು ಡೌನ್ ಲೋಡ್ ಮಾಡಿಕೊಂಡು ಮುದ್ರಣ ಪ್ರತಿ ಪಡೆಯಲು ಯಾವುದೇ ಹೆಚ್ಚುವರಿ ಹಣಕೊಡಬೇಕಾಗಿರುವುದಿಲ್ಲ ಇದರಿಂದ ತಮ್ಮ ನಕ್ಷೆಗಳ ಪ್ರಿಂಟ್ ಔಟ್ ಪಡೆಯಲು ಸರ್ವೆ ಕಚೇರಿಗಳಿಗೆ ಹೋಗಬೇಕಾಗಿರುವುದಿಲ್ಲಾ ಎಂದು ಅವರು ತಿಳಿಸಿದ್ದಾರೆ.
ವೆಬ್ ಸೈಟ್ ಗೆ ಭೇಟಿ ನೀಡಿದಾಗ ನಾಗರೀಕರು ಯಾವ ನಕ್ಷೆಗೆ ಅರ್ಜಿ ಸಲ್ಲಿಸುತ್ತಾರೋ ಆ ಅರ್ಜಿ ಸಂಖ್ಯೆ, ಮೊಬೈಲ್ ಸಂಖ್ಯೆ, ಸರ್ವೇ ನಂಬರ್, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ, ಸರ್ವೇ ನಂಬರ್ ಹೀಗೆ ವಿವಿಧ ಮಾಹಿತಿಗಳನ್ನು ದಾಖಲಿಸಿ ತಮ್ಮ ನಕ್ಷೆ ಪಡೆದುಕೊಳ್ಳಬಹುದಾಗಿದೆ.