NAMMUR EXPRESS NEWS
ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಮತ್ತೆ ಶುರುವಾಗಲಿದೆ. ಕಳೆದೊಂದು ವಾರದಿಂದ ಕೊಂಚ ತಣ್ಣಗಾಗಿದ್ದ ಮಳೆ ಇದೀಗ ಮತ್ತೆ 2-3 ದಿನ ಸುರಿಯುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಹವಾಮಾನದಲ್ಲಿ ಉಂಟಾದ ಬದಲಾವಣೆಗಳಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮತ್ತೆ ಮಳೆಯಾಗುತ್ತಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಅ. 2ರವರೆಗೂ ಮಳೆಯಾಗಲಿದೆ. ಬೆಳಗಾವಿ, ಹಾವೇರಿ, ಬಾಗಲಕೋಟೆ, ಗದಗ, ಯಾದಗಿರಿ, ಕೊಪ್ಪಳದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಜೊತೆಗೆ ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಬಹುತೇಕ ಎಲ್ಲ ಕಡೆಗಳಲ್ಲಿ ಕಳೆದ 2 ವಾರದಿಂದ ಮಳೆ ಸಂಪೂರ್ಣವಾಗಿ ಕಡಿಮೆಯಾಗಿತ್ತು. ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆ, ಚಳಿ ವಾತಾವರಣ ಕಂಡು ಬರುತ್ತಿದೆ.
ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ-ಅ.2ರವರೆಗೆ ಮಳೆ ಸೂಚನೆ: ಹವಾಮಾನ ಇಲಾಖೆ- ವಾರದಿಂದ ಕೊಂಚ ತಣ್ಣಗಾಗಿದ್ದ ಮಳೆರಾಯ
Related Posts
Add A Comment