- ಶೇಕಡಾ 17ರಷ್ಟು ವೇತನಕ್ಕೆ ಗ್ರೀನ್ ಸಿಗ್ನಲ್
- ಸಿಎಂ ಬೊಮ್ಮಾಯಿ ಮಹತ್ವದ ಘೋಷಣೆ
NAMMUR EXPRESS NEWS
ಬೆಂಗಳೂರು: ಸರ್ಕಾರಿ ನೌಕರರ ಮುಷ್ಕರ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಶೇ.17ರಷ್ಟು ವೇತನ ಹೆಚ್ಚಳ ಮಾಡೋದಾಗಿ ಮಹತ್ವದ ಘೋಷಣೆ ಮಾಡಿದ್ದಾರೆ. ಶೀಘ್ರದಲ್ಲಿಯೇ ಘೋಷಣೆ ಸಂಬಂಧ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಸರ್ಕಾರಿ ನೌಕರರ ಜೊತೆ ಮಂಗಳವಾರ ತಡರಾತ್ರಿವರೆಗೂ ಸಿಎಂ ಸುದೀರ್ಘ ಸಭೆ ನಡೆಸಿದ್ದರು. ಬುಧವಾರ ಬೆಳಗ್ಗೆ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ವೇತನ ಹೆಚ್ಚಳದ ಬಗ್ಗೆ ಘೋಷಣೆ ಮಾಡಿದ್ದಾರೆ.
7ನೇ ವೇತನ ಆಯೋಗ ಶಿಪಾರಸ್ಸು ಅನ್ವಯ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಎನ್ಸಿಎಸ್ ನೇತೃತ್ವದ ಸಮಿತಿ ರಚನೆ ಮಾಡಲಾಗಿದೆ. ವರದಿ ಕೊಟ್ಟ ನಂತರ ಎನ್ ಪಿಎಸ್ ಜಾರಿ ಮಾಡುವ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು. ಈ ಕುರಿತಂತೆ ಆದಷ್ಟು ಬೇಗ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.