- ಕಾಲು ಊತದ ಕಾರಣ ಬೆಂಗಳೂರಲ್ಲಿ ಚಿಕಿತ್ಸೆ
- ಕುಮಾರಸ್ವಾಮಿ ಮಾಹಿತಿ: ಈಗ ಚೇತರಿಕೆ
NAMMUR EXPRESS NEWS
ಬೆಂಗಳೂರು : ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಚೇತರಿಕೆಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಕಾಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 10:30ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರ ಪುತ್ರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ದೇವೇಗೌಡರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾರೆ. ಅವರು ಗುಣಮುಖರಾಗಿ ಬಂದ ಬಳಿಕ ಕೆಲವು ಕ್ಷೇತ್ರಗಳ ಚುನಾವಣೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.